ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಖಾಸಗಿ ವೈದ್ಯಾಧಿಕಾರಿಗಳು ಹಾಗೂ ತಜ್ಞ ವೈದ್ಯರ ಸಭೆಯು ನಡೆಯಿತು …
ಕೊರೋನಾ ಭೀತಿಯ ಈ ಸಂದರ್ಭದಲ್ಲಿ ಜನಸಾಮಾನ್ಯರ ಆರೋಗ್ಯ ಸಂವರ್ಧನೆಗೆ ಖಾಸಗಿ ವೈದ್ಯರು ತಾಲ್ಲೂಕು ಆಡಳಿತದೊಂದಿಗೆ ಸಹಕರಿಸಬೇಕು. ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಖಾಸಗಿ ಕ್ಲಿನಿಕ್ ಗಳು ಪ್ರತಿದಿನವೂ ಕೆಲಸ ಮಾಡಬೇಕು..ಪಟ್ಟಣದಲ್ಲಿ ಒಂದು ಕ್ಲಿನಿಕ್ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಡ್ಡಾಯವಾಗಿ ಕೆಲಸ ಮಾಡುವ ಮೂಲಕ ಜನರ ಸೇವೆಗೆ ಮುಂದಾಗಬೇಕು ಎಂದು ಮನವಿ ಮಾಡಿದ ತಹಶೀಲ್ದಾರ್ ಎಂ.ಶಿವಮೂರ್ತಿ ಜಿಲ್ಲಾಧಿಕಾರಿಗಳ ಅನುಮತಿ ಪಡೆದುಕೊಂಡು ಪಿಪಿಟಿ ಕಿಟ್ ಹಾಗೂ ಅಗತ್ಯ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲು ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದರು..
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್, ಖಾಸಗಿ
ವೈದ್ಯರಾದ ಡಾ.ಅರವಿಂದ್, ಡಾ.ಹರ್ಷ, ಡಾ.ದಿವಾಕರ್, ಡಾ.ರಾಜೇಶ್ವರಿ, ಡಾ.ಲೋಹಿತ್, ಡಾ. ಬದ್ರೀನಾಥ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು…..
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ