July 14, 2024

Bhavana Tv

Its Your Channel

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೯ನೇ ಜಯಂತ್ಯೋತ್ಸವ, ಕೊರೋನಾ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಆಚರಣೆ

ಕೆಆರ್‌ಪೇಟೆ : ರಾಜ್ಯದ ಪೌರಾಡಳಿತ, ರೇಷ್ಮೆ ಹಾಗೂ ಪೌರಾಡಳಿತ ಖಾತೆಗಳ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.

ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವ ನಾರಾಯಣಗೌಡ ಮಾತನಾಡಿ ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕುವ ನಿಟ್ಟಿನಲ್ಲಿ ಜನಸಾಮಾನ್ಯರು ಮನೆಯಲ್ಲಿಯೇ ಇದ್ದುಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.. ದಾನಿಗಳು ಸಮಾಜದಲ್ಲಿ ಬಡಜನರು ಹಸಿವಿನಿಂದ ಬಳಲದಂತೆ ಉದಾರವಾಗಿ ಸಹಾಯ ಮಾಡಬೇಕು. ಕೃಷ್ಣರಾಜಪೇಟೆ ತಾಲೂಕಿನ ಕಲ್ಲಹಳ್ಳಿಯ ಭೂವರಹನಾಥ ದೇವಾಲಯದ ದಾಸೋಹ ಟ್ರಸ್ಟ್ ಎರಡು ಸಾವಿರಕ್ಕೂ ಹೆಚ್ಚಿನ ಬಡಜನರು ಹಾಗೂ ಕೃಷಿಕೂಲಿ ಕಾರ್ಮಿಕರಿಗೆ ಮಧ್ಯಾಹ್ನದ ಊಟವನ್ನು ನೀಡುತ್ತಿದ್ದು ಲಾಕ್ ಡೌನ್ ಮೇ.೩ರ ವರೆಗೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಅಲ್ಲಿಯವರೆಗೂ ಊಟ ಪ್ರಸಾದವನ್ನು ನೀಡಲು ಬದ್ಧವಾಗಿದೆ. ಮೈಸೂರಿನ ಪರಕಾಲಮಠದ ಶ್ರೀಗಳು ಹಾಗೂ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮ್ಯಾನೇಜಿಂಗ್ ಟ್ರಸ್ಟಿ ಶ್ರೀನಿವಾಸರಾಘವನ್ ಅವರಿಗೆ ಆಭಾರಿಯಾಗಿರುವುದಾಗಿ ತಿಳಿಸಿದರು. ರೈತರು ಬೆಳೆದಿರುವ ಹಣ್ಣು ತರಕಾರಿಗಳ ಮಾರಾಟ ಹಾಗೂ ಸಾಗಾಣಿಕೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು.ಕೊರೋನಾ ಸಂದಿಗ್ಧ ಸಮಯದಲ್ಲಿ ಜನಸಾಮಾನ್ಯರಿಗೆ ಯಾವುದೇ ತೊಂದರೆಗಳಾಗದAತೆ ಎಚ್ಚರ ವಹಿಸಬೇಕು ಎಂದು ಸಚಿವರು ಕೈಮುಗಿದು ಮನವಿ ಮಾಡಿದರು.

ವರದಿ. ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ .

error: