ನಾಗಮಂಗಲ: ಸಂವಿದಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನದ ಪ್ರಯುಕ್ತ ಪಟ್ಟಣದ ಮಿನಿವಿದಾನಸೌದದ ಮುಂದಿರುವ ಬಾಬಾ ಸಾಹೇಬ ಡಾ: ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ತಾಲ್ಲೂಕು ಆಡಳಿತ ಮತ್ತು ವಿವಿಧ ಸಂಘಟನೆ ಮುಖಂಡರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.
ತಾಲ್ಲೂಕು ಆಡಳಿತದ ಪರವಾಗಿ ಮಾಲಾರ್ಪಣೆ ಮಾಡಿದ ತಹಶೀಲ್ದಾರ್ ಕುಂಞ ಅಹಮದ್ ಮಾತನಾಡಿ ಕೊರೋನಾ ಸೊಂಕು ನಿಯಂತ್ರಣಕ್ಕಾಗಿ ಸರ್ಕಾರದ ಲಾಕ್ ಡೌನ್ ಆದೇಶ ಪಾಲಿಸಬೇಕಾಗಿರುವುದರಿಂದ ತಾಲ್ಲೂಕು ಆಡಳಿತ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನ ಸರಳವಾಗಿ ಆಚರಿಸಿದೆ.
ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟ ದೇಶಕ್ಕಾಗಿ ಅವರ ಕೊಡುಗೆಯನ್ನ ಸ್ಮರಿಸುತ್ತಾ ಅವರ ತತ್ವ ಸಿದ್ದಾಂತಗಳನ್ನ ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ತಾಲ್ಲೂಕು ಆಡಳಿತ ಸರ್ಕಾರದ ಆದೇಶದಂತೆ ತಹಶೀಲ್ದಾರ್ ಕಛೇರಿಯಲ್ಲಿ ಅಂಬೇಡ್ಕರ್ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವಿವಿಧ ಇಲಾಖೆ ಅಧಿಕಾರಿಗಳು ಗೌರವ ಸಲ್ಲಿಸಿದ್ದಾರೆ.
ಈ ವೇಳೆ ತಹಶೀಲ್ದಾರ್ ಕುಂಞ ಅಹಮದ್, ಸಿಪಿಐ ರಾಜೇಂದ್ರ. ಪಿಎಸ್ ಐ ರವಿಕಿರಣ್, ಸಮಾಜಕಲ್ಯಾಣಾಧಿಕಾರಿ ರವಿಕುಮಾರ್, ಹಾಗೂ ದಲಿತ ಸಂಘಟನೆಯ ಮುಖಂಡರಾದ ಮುಳುಕಟ್ಟೆ ಶಿವರಾಮಯ್ಯ,ಕಂಚಿನಕೋಟೆ ಮೂರ್ತಿ, ಕ್ಯಾತನಹಳ್ಳಿ ಮಂಜು, ವೈರಮುಡಿ,ಪುಟ್ಟಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.
ವರದಿ: ದೇ.ರಾ .ಜಗದೀಶ ನಾಗಮಂಗಲ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ