April 30, 2024

Bhavana Tv

Its Your Channel

ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿಯ ಕಾರ್ಯಕರ್ತರು ಕಂದಾಯ ಇಲಾಖೆಯ ನೌಕರರ ಮೇಲೆ ದಾಖಲಿಸಿರುವ ಸುಳ್ಳು ದೂರಿನ ಆಧಾರದ ಮೇಲೆ ದಾಖಲಿಸಿರುವ ಎಫ್.ಐ.ಆರ್ ಅನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸತ್ಯಾಸತ್ಯತೆಯನ್ನು ಪರಿಶೀಲಿಸಿ ವಾಸ್ತವ ನೆಲೆಗಟ್ಟಿನ ಆಧಾರದ ಮೇಲೆ ಬಿ ರಿಪೋರ್ಟ್ ಪಡೆದು ವಜಾಗೊಳಿಸಿ ಸರ್ಕಾರಿ ನೌಕರರು ಯಾವುದೇ ಭಯ ಭೀತಿಯಿಲ್ಲದೇ ಮುಕ್ತವಾಗಿ ಸರ್ಕಾರದ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಕೃಷ್ಣರಾಜಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ ಮನವಿ ಮಾಡಿದರು ..

ಅವರು ಇಂದು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಪಾಂಡವಪುರ ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಾಲೂಕು ಕಛೇರಿಗೆ ನುಗ್ಗಿ ದಾಂಧಲೆ ನಡೆಸಿರುವ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಸರ್ಕಾರಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ತಹಶೀಲ್ದಾರ್ ಸೇರಿದಂತೆ 23ಕ್ಕೂ ಹೆಚ್ಚಿನ ಕಂದಾಯ ಇಲಾಖೆಯ ನೌಕರರ ವಿರುದ್ಧ ಸುಳ್ಳು ದೂರನ್ನು ದಾಖಲಿಸುವ ಮೂಲಕ ಸರ್ಕಾರಿ ನೌಕರರ ವಿಶ್ವಾಸಾರ್ಹತೆಗೆ ಧಕ್ಕೆ ತಂದಿದ್ದಾರೆ. ನೌಕರರು ಮುಕ್ತ ಹಾಗೂ ನ್ಯಾಯಸಮ್ಮವಾಗಿ ಕೆಲಸ ಮಾಡಲು ಅನುವು ಮಾಡಿಕೊಡದೇ ಭಯದ ವಾತಾವರಣ ನಿರ್ಮಿಸಿರುವ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಮಾನವಿಯತೆಯನ್ನು ಮರೆತು ಮೃಗಗಳಂತೆ ವರ್ತಿಸಿ ನೌಕರರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ನಿಷ್ಠೆಯಿಂದ ಕೆಲಸ ಮಾಡುತ್ತಿದ್ದ ನೌಕರರಿಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡದೇ ದೌರ್ಜನ್ಯ ನಡೆಸಿರುವುದು ಖಂಡನಾರ್ಹವಾಗಿದೆ ಎಂದು ತಿಳಿಸಿದ ಸಿ.ಕೆ.ಶಿವರಾಮೇಗೌಡ ಮಾನ್ಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳು ಮಧ್ಯೆ ಪ್ರವೇಶಿಸಿ ವಾತಾವರಣವನ್ನು ತಿಳಿಗೊಳಿಸಿ ಸರ್ಕಾರಿ ನೌಕರರ ಮೇಲೆ ಹೂಡಿರುವ ಎಫ್.ಐ.ಆರ್ ಅನ್ನು ರದ್ದುಪಡಿಸಿ ನೌಕರ ಬಂಧುಗಳು ಮುಕ್ತವಾಗಿ ಹಾಗೂ ನ್ಯಾಯಸಮ್ಮತವಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಶಿವರಾಮೇಗೌಡ ಮನವಿ ಮಾಡಿದರು.

ಕಂದಾಯ ಇಲಾಖೆಯ ನೌಕರರ ಸಂಘದ ಗೌರವಾಧ್ಯಕ್ಷರಾದ ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ಅಧ್ಯಕ್ಷೆ ಬಿ.ಎಲ್.ಚಂದ್ರಕಲಾ, ಕಾರ್ಯದರ್ಶಿ ಸೋಮಾಚಾರ್, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪಿ.ಜೆ.ಕುಮಾರ್, ಖಜಾಂಚಿ ಆನಂದಕುಮಾರ್, ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಸುಧಾಕರ್ ಮಾತನಾಡಿ ಪಾಂಡವಪುರ ತಾಲ್ಲೂಕಿನ ಕಂದಾಯ ಇಲಾಖೆಯ ನೌಕರರ ಮೇಲೆ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ದಾಖಲಿಸಿರುವ ಸುಳ್ಳು ದೂರಿನ ಎಫ್.ಐ.ಆರ್ ಅನ್ನು ಬಿ.ರಿಪೋರ್ಟ್ ಪಡೆದು ರದ್ದುಪಡಿಸುವ ಮೂಲಕ ನೌಕರ ಬಂಧುಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಮಧ್ಯೆ ಪ್ರವೇಶಿಸಿ ವಾತಾವರಣವನ್ನು ತಿಳಿಗೊಳಿಸಿ ನೌಕರರು ಭೀತಿಯಿಂದ ಮುಕ್ತರಾಗಿ ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.
.

error: