June 15, 2024

Bhavana Tv

Its Your Channel

ಕೆಲಸವಿಲ್ಲದೆ ಸಂಕಷ್ಠದಲ್ಲಿರುವ ಬಡಜನರು ಹಾಗೂ ನಿರ್ಗತಿಕರಿಗೆ ಆಹಾರಧಾನ್ಯದ ಅಗತ್ಯ ವಸ್ತುಗಳ ಕಿಟ್ ವಿತರಣೆ.

ಕೃಷ್ಣರಾಜಪೇಟೆ ಪಟ್ಟಣದಲ್ಲಿ ಶ್ರೀರಂಗಪಟ್ಟಣದ ಸನ್ ಪ್ಯೂರ್ ರೀಫೈಂಡ್ ಆಯಿಲ್ ಸಂಸ್ಥೆಯ ಮಾಸಮ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಮಲ್ಲಿಕಾರ್ಜುನ ಏಜೆನ್ಸೀಸ್ ನೇತೃತ್ವದಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಠದಲ್ಲಿರುವ ಬಡಜನರು ಹಾಗೂ ನಿರ್ಗತಿಕರಿಗೆ ಆಹಾರಧಾನ್ಯದ ಅಗತ್ಯ ವಸ್ತುಗಳ ಕಿಟ್ ಗಳನ್ನು ವಿತರಿಸಲಾಯಿತು.

ಕೃಷ್ಣರಾಜಪೇಟೆ ಪಟ್ಟಣದ ಉದ್ಯಮಿಗಳು ಹಾಗೂ ಸಮಾಜಸೇವಕರಾದ ಡಾ.ಕೆ.ಎಸ್.ರಾಜೇಶ್ ಮತ್ತು ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್ ಅಗತ್ಯ ಜೀವನಾವಶ್ಯಕ ವಸ್ತುಗಳ ಕಿಟ್ ಅನ್ನು ವಿತರಿಸಿ ನಮ್ಮ ಆರೋಗ್ಯ ನಮ್ಮ ಕೈಯ್ಯಲ್ಲಿಯೇ ಇರುವುದರಿಂದ ಅಗತ್ಯ ಆರೋಗ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಪ್ರಧಾನ ಮಂತ್ರಿಗಳ ನಿರ್ದೇಶನದಂತೆ ಮೇ.೦೩ರ ವರೆಗೆ ಕಡ್ಡಾಯವಾಗಿ ಮನೆಯಲ್ಲಿಯೇ ಇದ್ದು ಕೊರೋನಾ ವೈರಾಣುಗಳು ಹರಡದಂತೆ ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದರು…

ಮನೆಯಿಂದ ಹೊರಗೆ ಅಗತ್ಯ ವಸ್ತುಗಳನ್ನು ಕೊಳ್ಳಲು ಬಂದಾಗ ಮುಖಕ್ಕೆ ಮಾಸ್ಕ್ ಧರಿಸಿ, ಕೈಗಳನ್ನು ಸ್ಯಾನಿಟೈಸರ್ ನಿಂದ ತೊಳೆದುಕೊಳ್ಳಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಪಣತೊಡಬೇಕು ಎಂದು ಮನವಿ ಮಾಡಿದರು..

ಈ ಸಂದರ್ಭದಲ್ಲಿ ಮುಖಂಡರಾದ ಕೆ.ಜೆ.ವಿಜಯಕುಮಾರ್, ಯಶೋಧರ, ಕೆ.ಆರ್.ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು….
ವರದಿ. ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

error: