ಕೆ.ಆರ್.ಪೇಟೆ ಪಟ್ಟಣದ ಗಣಪತಿ ಪಾರ್ಕಿನಲ್ಲಿ ಅಲೆಮಾರಿ ಜನಾಂಗದವರು, ಮುಸ್ಲಿಂ ಬಂಧುಗಳು ಹಾಗೂ ಕಡುಬಡವರಿಗೆ ಮಾಸ್ಕ್ ಗಳನ್ನು ವಿತರಿಸಿದ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರಶ್ಮಿ , ಕಾರ್ಯದರ್ಶಿ ರೇಖಾ, ಮಾಜಿಅಧ್ಯಕ್ಷೆ ಪ್ರೇಮಾ ನೇತೃತ್ವದ ತಂಡ….
ಪ್ರತಿಯೊಬ್ಬರೂ ಆರೋಗ್ಯ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.. ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕುವ ನಿಟ್ಟಿನಲ್ಲಿ ಎಲ್ಲರೂ ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಜಿಲ್ಲಾಧ್ಯಕ್ಷೆ ರಶ್ಮಿ ಜಿಲ್ಲೆಯಲ್ಲಿ ಒಟ್ಟು 40 ಸಾವಿರ ಮಾಸ್ಕುಗಳು ಹಾಗೂ ಸ್ಯಾನಿಟೈಸರ್ ವಿತರಿಸಲಾಗುತ್ತಿದೆ ಎಂದು ವಿವರಿಸಿ ಅಗತ್ಯ ಮುಂಜಾಗ್ರತೆ ಅನುಸರಿಸಬೇಕು ಎಂದು ಮನವಿ ಮಾಡಿದರು… ಇದೇ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಮಹಿಳೆಯರಿಗೆ ಮಜ್ಜಿಗೆ ವಿತರಿಸಲಾಯಿತು…
ಬಿಜೆಪಿ ಮುಖಂಡರಾದ ಪ್ರೆಸ್ ಕುಮಾರಸ್ವಾಮಿ, ಕೆ.ವಿನೋದ್ ಕುಮಾರ್, ನಂಜುಂಡ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಮೊಬೈಲ್ ಪರಮೇಶ್, ದಯಾನಂದ ಮತ್ತಿತರರು ಮಾಸ್ಕ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು….
ವರದಿ. ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ …
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ