May 17, 2024

Bhavana Tv

Its Your Channel

ಕನ್ನಡಾಂಬೆ ರಕ್ಷಣಾ ವೇದಿಕೆಯ ವತಿಯಿಂದ ರಾಜ್ಯಾದ್ಯಂತ ಸುಮಾರು 20 ಸಾವಿರ ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟ್ ಬುಕ್, ಶಿಕ್ಷಣ ಸಾಮಾಗ್ರಿಗಳ ವಿತರಣೆ

ಕೃಷ್ಣರಾಜಪೇಟೆ ಸಮೀಪದ ದೊಡ್ಡಕಾಡನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 180 ಮಕ್ಕಳಿಗೆ ಉಚಿತ ನೋಟ್ ಬುಕ್ ಹಾಗೂ ಶಿಕ್ಷಣ ಸಾಮಾಗ್ರಿಗಳನ್ನು ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜ್ಯದ್ಯಕ್ಷರಾದ ರಾಜಶೇಖರ್ ವಿತರಿಸಿದರು..

ನಂತರ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಕಡಿಮೆಯಾಗಬೇಕು . ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಹೆಚ್ಚಳವಾಗಬೇಕು, ಕನ್ನಡ ನಾಡು ನುಡಿ ಬಗ್ಗೆ ಮಕ್ಕಳಿಗೆ ತಿಳಿಸಬೇಕು, ಈ ಹಿಂದೇ ಎಷ್ಟೂ ಮಹನೀಯರು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನ ಪಡೆದುಕೊಂಡಿದ್ದಾರೆ ಅಲ್ಲದೇ ನಾನು ಸಹ ಇದೇ ಶಾಲೆಯ ಹಳೆಯ ವಿದ್ಯಾರ್ಥಿಯಾಗಿ ನಾನು ಓದು ಬರಹ ಕಲಿತ ಶಾಲೆ ನೋಡಿ ಖುಷಿ ತಂದಿದೆ ಶಾಲೆಯನ್ನು ಇನ್ನಷ್ಟು ಉತ್ತಮವಾಗಿ ಅಭಿವೃದ್ಧಿಪಡಿಸಬೇಕು ಮುಂದಿನ ದಿನಗಳಲ್ಲಿ ನನ್ನ ಕೈಲಾದ ಸಹಾಯವನ್ನು ಮಾಡುವುದಾಗಿ ತಿಳಿಸಿದರು..

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅದ್ಯಕ್ಷ ರಮೇಶ್, ಕನ್ನಡಾಂಭೆ ರಕ್ಷಣಾ ವೇದಿಕೆಯ ಸದಸ್ಯರಾದ ಹೇಮಂತ್ ಕುಮಾರ್, ಶೇಖರ್ ದಾಳಗೌಡನಹಳ್ಳಿ, ಕುಮಾರಸ್ವಾಮಿ, ನವೀನ್ ಕುಮಾರ್, ಲೋಕೇಶ್, ಶಾಳೆಯ ಮುಖ್ಯ ಶಿಕ್ಷಕ ಮಹಾದೇಶಪ್ಪ, ಶಿಕ್ಷಕರಾದ ಮಹದೇವಸ್ವಾಮಿ, ಶಾಲಾ ಮಕ್ಕಳು, ಗ್ರಾಮಸ್ಥರು, ಉಪಸ್ಥಿರಿದರು,

ವರದಿ: ಶಂಭು ಕಿಕ್ಕೇರಿ

error: