ಉಪವಾಸ ವ್ರತವನ್ನು ಮಾಡಿ ಶ್ರದ್ಧಾ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಿಸುವ ರಂಜಾನ್ ಹಬ್ಬವನ್ನು ಅವರವರ ಮನೆಯಲ್ಲಿಯೇ ಆಚರಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಕೃಷ್ಣರಾಜಪೇಟೆ ತಾಲ್ಲೂಕಿನ ಮುಸ್ಲಿಂ ಬಾಂಧವರಲ್ಲಿ ಮನವಿ ಮಾಡಿದರು …
ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ…ಮುಸ್ಲಿA ಬಂಧುಗಳು ವ್ಯಯಕ್ತಿಕ ಸ್ವಚ್ಛತೆ ಕಾಪಾಡಿಕೊಂಡು, ಆರೋಗ್ಯತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸರಳವಾಗಿ ರಂಜಾನ್ ಹಬ್ಬವನ್ನು ಆಚರಿಸಬೇಕು…
ವದಂತಿಗಳಿಗೆ ಕಿವಿಗೊಡದೇ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು. ಮುಸ್ಲಿಂ ಬಂಧುಗಳು ಈ ಬಾರಿ ಅತ್ಯಂತ ಸರಳವಾಗಿ ರಂಜಾನ್ ಹಬ್ಬವನ್ನು ಆಚರಿಸಿ ಕೊರೋನಾ ಹಾವಳಿಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಬ್ಯಾಟರಾಯಗೌಡ ಕರೆ ನೀಡಿದರು…
ಕೃಷ್ಣರಾಜಪೇಟೆ ಪಟ್ಟಣದ ಟೌನ್ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಪುರಸಭೆಯ ಮಾಜಿಅಧ್ಯಕ್ಷ ಕೆ.ಗೌಸ್ ಖಾನ್, ಸದಸ್ಯರಾದ ಖಮ್ಮರ್ ಬೇಗಂ, ಮಾಜಿಸದಸ್ಯ ನವೀದ್ ಅಹಮದ್, ಶಬೀರ್, ನಿಸಾರ್ ಅಹಮದ್ ಸೇರಿದಂತೆ ೨೫ಕ್ಕೂ ಹೆಚ್ಚಿನ ಮುಸ್ಲಿಂ ಬಾಂಧವರು ಸಭೆಯಲ್ಲಿ ಭಾಗವಹಿಸಿದ್ದರು…
ವರದಿ. ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ ..
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ