April 28, 2024

Bhavana Tv

Its Your Channel

ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಸಂಸ್ಥಾಪಕರಾದ ಬಿ.ಎಂ ಕಿರಣ್ ನೇತೃತ್ವದಲ್ಲಿ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ

ಕಿಕ್ಕೇರಿ:-ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಹುಟ್ಟು ಹಬ್ಬವನ್ನು ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಸಂಸ್ಥಾಪಕರಾದ ಬಿ.ಎಂ ಕಿರಣ್ ನೇತೃತ್ವದಲ್ಲಿ ಸಾವಿರಾರು ಅಪ್ಪು ಅಭಿಮಾನಿಗಳು ಕೇಕ್ ಕತ್ತರಿಸವ ಮೂಲಕ ಅದ್ದೂರಿಯಾಗಿ ಆಚರಣೆ ಮಾಡಲಾಯಿತು

ಕೆ ಆರ್ ಪೇಟೆ ಪಟ್ಟಣದ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ವತಿಯಿಂದ, ಪಟ್ಟಣದ ಬೊಮ್ಮೇಗೌಡ ವೃತ್ತದಿಂದ ದುರ್ಗಾ ಭವನ ವೃತ್ತದವರೆಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳೊAದಿಗೆ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡುವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ರವರ ಭಾವ ಚಿತ್ರದೊಂದಿಗೆ ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಸಂಸ್ಥಾಪಕ ಹಾಗೂ ತಾಲ್ಲೂಕಿನ ಸಮಾಜ ಸೇವಕ ಎಂದೇ ಹೆಸರುಗಳಿಸಿರುವ ಬಿ.ಎಂ ಕಿರಣ್ ರವರೊಂದಿಗೆ ಸಾವಿರಾರು ಅಪ್ಪು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತ್ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಪಟಾಕಿ ಸಿಡಿಸಿ ಕೇಕ್ ಕತ್ತರಿಸವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿ ಜೇಮ್ಸ್ ಚಿತ್ರಕ್ಕೆ ಶುಭ ಹಾರೈಸಿ ಸಂಭ್ರಮಿಸಿದರು..

ವರದಿ: ಶಂಭು ಕಿಕ್ಕೇರಿ.

error: