September 16, 2024

Bhavana Tv

Its Your Channel

ಜಾಗೃತಿ ಕ್ರಮಗಳ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ

ಕೃಷ್ಣರಾಜಪೇಟೆ ಪಟ್ಟಣದ ತಾಲ್ಲೂಕು ಪಂಚಾಯತಿಯ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ತೋಟಗಾರಿಕೆ, ರೇಷ್ಮೆ ಹಾಗೂ ಪೌರಾಡಳಿತ ಖಾತೆಗಳ ಸಚಿವರಾದ ಡಾ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿಯಂತ್ರಣ ಜಾಗೃತಿ ಕ್ರಮಗಳನ್ನು ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದರು.

ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದAತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಜನಸಾಮಾನ್ಯರಲ್ಲಿ ಅರಿವಿನ ಜಾಗೃತಿ ಮೂಡಿಸಬೇಕು. ಕೊರೋನಾ ಸೋಂಕು ಹರಡದಂತೆ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು, ಸಧ್ಯದ ಪರಿಸ್ಥಿತಿಯಲ್ಲಿ ಕೊರೋನಾ ಪ್ರಕರಣಗಳು ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆಯಾದರೂ ಯಾರೂ ಭಯಪಡುವ ಅಗತ್ಯವಿಲ್ಲ…ಕೊರೋನಾ ಸೋಂಕಿತರು ಅಗತ್ಯ ಪರೀಕ್ಷೆಗಳಿಗೆ ಒಳಪಟ್ಟು, ಸೂಕ್ತವಾದ ಚಿಕಿತ್ಸೆಯನ್ನು ಪಡೆದುಕೊಂಡರೆ ಕೊರೋನಾ ಸೋಂಕಿನಿAದ ಮುಕ್ತರಾಗಬಹುದು. ಆದ್ದರಿಂದ ಭಯಪಡುವ ಅಗತ್ಯವಿಲ್ಲ, ಆತ್ಮವಿಶ್ವಾಸ ಬೆಳೆಸಿಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ನಮ್ಮ ಆರೋಗ್ಯವು ನಮ್ಮ ಕೈಯ್ಯಲ್ಲಿದೆ ಎಂಬ ಸತ್ಯ ಅರಿಯಬೇಕು ತಾಲ್ಲೂಕು ಆರೋಗ್ಯಾಧಿಕಾರಿಗಳು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಜನಸಾಮಾನ್ಯರಲ್ಲಿ ಆರೋಗ್ಯ ಜಾಗೃತಿ ಮೂಡಿಸಿ ಸಾಮಾಜಿಕ ಅಂತರಕ್ಕೆ ಮುಂದಾಗಬೇಕು ಎಂದು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ಮನವಿ ಮಾಡಿದ ಸಚಿವರು ಕುಡಿಯುವ ನೀರು ಸರಬರಾಜು ಯೋಜನೆಯ ವಿದ್ಯುತ್ ಪರಿವರ್ತಕಗಳು ಸುಟ್ಟರೆ ತಕ್ಷಣವೇ ಬದಲಿ ಟಿಸಿಗಳನ್ನು ಅಳವಡಿಸಲು ಕ್ರಮಕೈಗೊಳ್ಳಬೇಕು, ಇಲ್ಲದಿದ್ದರೆ ಮುಂದಾಗಬಹುದಾದ ತೊಂದರೆ ಹಾಗೂ ಅನಾಹುತಕ್ಕೆ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸೆಸ್ಕ್ ಕಾರ್ಯಪಾಲಕ ಅಭಿಯಂತರ ನಾಗರಾಜು ಅವರಿಗೆ ಎಚ್ಚರಿಕೆ ನೀಡಿದರು…

ಸಭೆಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಪಾಂಡವಪುರ ಉಪವಿಭಾಗಾಧಿಕಾರಿ ವಿ.ಆರ್.ಶೈಲಜಾ,
ತಹಶೀಲ್ದಾರ್ ಎಂ.ಶಿವಮೂರ್ತಿ, ನಾಗಮಂಗಲ ಡಿವೈಎಸ್ ಪಿ ಕೆ.ಬಿ.ವಿಶ್ವನಾಥ್, ಅಬ್ಕಾರಿ ನಿರೀಕ್ಷಕಿ ಭವ್ಯ, ತಾಲ್ಲೂಕು ಸಮಾಜಕಲ್ಯಾಣಾಧಿಕಾರಿ ಡಾ.ಮನುಕುಮಾರ್, ತಾಲ್ಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್, ಸಿಡಿಪಿಓ ದೇವಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಜಿ.ಸಿ.ಶಿವಪ್ಪ, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕಿ ಮೇನಕಾದೇವಿ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು….

ವರದಿ. ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ …

error: