July 14, 2024

Bhavana Tv

Its Your Channel

ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಕೊರೋನಾ ನಿಯಂತ್ರಣ ಅಗತ್ಯ ಕ್ರಮಗಳ ಸಂಬoಧವಾಗಿ ಜಾಗೃತ ಸಮಿತಿಯ ಸಭೆ.

ಮುಂಬೈ, ಪಾಂಡಿಚೇರಿ ಸೇರಿದಂತೆ ಹೊರ ರಾಜ್ಯಗಳಿಂದ ಹಾಗೂ ಹೊರ ಜಿಲ್ಲೆಯಿಂದ ಕೆ.ಆರ್.ಪೇಟೆ ತಾಲೂಕಿಗೆ ಆಗಮಿಸಿರುವ ೧೦ ಜನರನ್ನು ಪಟ್ಟಣದ ನವೋದಯ ಮಾದರಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಹೋಂ ಕ್ವಾರಂಟೈನ್ ಮಾಡಿ ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗ್ರಾಮಗಳಿಗೆ ಯಾರೇ ಹೊಸ ವ್ಯಕ್ತಿಗಳು ಆಗಮಿಸಿದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಇಲ್ಲವೇ ಸಮೀಪದ ಆಸ್ಪತ್ರೆಯ ಆರೋಗ್ಯಾಧಿಕಾರಿಗಳು ಅಥವಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತರಬೇಕು. ಜ್ವರ, ಕೆಮ್ಮು, ಶೀತದಿಂದ ಬಳಲುತ್ತಿರುವವರಿದ್ದರೆ ಕಡ್ಡಾಯವಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಬೇಕು. ತಾಲ್ಲೂಕಿನಲ್ಲಿ ಕೊರೋನಾ ಲಾಕ್ ಡೌನ್ ನಿಯಮಗಳನ್ನು ಕರಾರುವಕ್ಕಾಗಿ ಪಾಲಿಸುತ್ತಿರುವುದರಿಂದಾಗಿ ಈವರೆಗೆ ಒಂದೇ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬoದಿಲ್ಲವಾದ್ದರಿoದ ಜನಸಾಮಾನ್ಯರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಜೊತೆಗೆ ಕಡ್ಡಾಯವಾಗಿ ಮನೆಯಲ್ಲಿಯೇ ಇರಬೇಕು …ಮನೆಯಿಂದ ಅವಶ್ಯ ಕೆಲಸಕ್ಕೆ ಹೊರಬಂದಾಗ ಮಾಸ್ಕ್ ಇಲ್ಲವೇ ಕರವಸ್ತ್ರದಿಂದ ಬಾಯಿ ಹಾಗೂ ಮೂಗನ್ನು ಮುಚ್ಚಿಕೊಳ್ಳಬೇಕು…ಕೈಗಳನ್ನು ಸ್ಯಾನಿಟೈಸರ್ ಇಲ್ಲವೇ ಸೋಪಿನಿಂದ ತೊಳೆದುಕೊಂಡು ವಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಶಿವಮೂರ್ತಿ ಮನವಿ ಮಾಡಿದರು…
ವಾರದಲ್ಲಿ ಒಂದು ದಿನ ಪುರಸಭೆ ವ್ಯಾಪ್ತಿಯಲ್ಲಿ ಮಾಂಸದoಗಡಿ ತೆರೆಯಲು ಅನುಮತಿ ನೀಡಲು ಸಮಾಲೋಚನೆ …
ಜನಸಾಮಾನ್ಯರ ಒತ್ತಡ ಹಾಗೂ ಮನವಿಯ ಹಿನ್ನೆಲೆಯಲ್ಲಿ ವಾರದಲ್ಲಿ ಒಂದು ದಿನ ಮಾಂಸದoಗಡಿಗಳನ್ನು ಪಟ್ಟಣದಲ್ಲಿ ತೆರೆಯಲು ಅನುಮತಿ ನೀಡಲು ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಪತ್ರಕರ್ತರ ಪ್ರಶ್ನೆಗೆ ತಹಶೀಲ್ದಾರ್ ಉತ್ತರಿಸಿದರು..

ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಪಟ್ಟಣ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್, ಉಪತಹಶೀಲ್ದಾರ್ ಲಕ್ಷ್ಮೀಕಾಂತ್, ತಾಲ್ಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್ ಮತ್ತಿತರರು ಉಪಸ್ಥಿತರಿದ್ದರು…


ವರದಿ. ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ ..

error: