
ಮಂಡ್ಯ: ಕೋವಿಡ್-೧೯ ಟೆಸ್ಟ್ ನಿಲ್ಲಿಸುವಂತೆ ಜೆಡಿಎಸ್ ಎಂಎಲ್‌ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರ ಗಲಾಟೆ ನಡೆಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಇಂದು ಪತ್ರಕರ್ತರ ಕೋವಿಡ್ ೧೯ ಟೆಸ್ಟ್ ಏರ್ಪಡಿಸಲಾಗಿತ್ತು. ಈ ವೇಳೆ ಜನ ನಿಬಿಡ ಪ್ರದೇಶವಾದ ಇಲ್ಲಿ ಕೊವಿಡ್ ಟೆಸ್ಟ್ ಮಾಡಬೇಡಿ ಎಂದು ತನ್ನ ಸಂಗಡಿಗರನ್ನು ಕರೆದುಕೊಂಡು ಬಂದು ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಗಲಾಟೆ ನಡೆಸಿದ್ದಾರೆ. ಅಲ್ಲದೇ ಇಲ್ಲಿ ಹತ್ತಿರದಲ್ಲಿ ತಮ್ಮ ಮನೆಯೂ ಇದೆ, ಇಲ್ಲಿ ಕರೊನಾ ಸೋಂಕು ಹರಡಲು ಬಂದಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಶ್ರೀಕಂಠೇಗೌಡರ ಪುತ್ರ ಪತ್ರಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀಕಂಠೇಗೌಡ ಜನರನ್ನು ಎತ್ತಿ ಕಟ್ಟಿ ಗಾಲಾಅಟೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಗಲಾಟೆ ಪ್ರಕರಣ ಸಂಬAಧ ಶ್ರೀಕಂಠೇಗೌಡ ಹಾಗೂ ಪುತ್ರನ ವಿರುದ್ಧ ಎಫ್ ಐಆರ್ ದಾಖಲಾಗಿದೆ.
More Stories
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ
ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ
ರಾತ್ರೋರಾತ್ರಿ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಮೇಲೆ ತಮ್ಮ ಕೈ ಚಳಕ ತೋರಿದ ಖದೀಮರು