ಮಂಡ್ಯ ಜಿಲ್ಲೆಯ ಕೃಷ್ಣರಾಜ ಪೇಟೆ ಪಟ್ಟಣದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಆಯೋಜಿಸಿದ ಕಾರ್ಯಕ್ರಮವನ್ನು ಉದ್ದೇಶಿಸಿ ತಹಶೀಲ್ದಾರ್ ಎಂ.ಶಿವಮೂರ್ತಿ ಮಾತನಾಡಿ ನಿತ್ಯೋತ್ಸವ ಕವಿಗಳೆಂದೇ ನಾಡಿನಾದ್ಯಂತ ಸುಪ್ರಸಿದ್ಧರಾಗಿದ್ದ ಸಾಹಿತಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರೂ ಕನ್ನಡ ಸಾಹಿತ್ಯದಲ್ಲಿ ಆಳವಾದ ಕೃಷಿಯನ್ನು ಮಾಡಿ, ನಾಡುನುಡಿಯ ಬಗ್ಗೆ ಅಪಾರವಾದ ಅಭಿಮಾನವನ್ನು ಹೊಂದಿದ್ದರು ಎಂದು ಗುಣಗಾನ ಮಾಡಿದ ತಹಶೀಲ್ದಾರ್ ಎಂ.ಶಿವಮೂರ್ತಿ ದಿವಂಗತ ನಿಸಾರ್ ಅಹಮದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ತಾಲ್ಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ಮಾಜಿ ಅಧ್ಯಕ್ಷ ಕೆ.ಆರ್.ನೀಲಕಂಠ , ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್, ಪತ್ರಕರ್ತರ ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್, ಪ್ರೌಢಶಾಲೆಯ ಸಹಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್.ಚಂದ್ರಶೇಖರ್, ಕೆ.ಪಿ.ಬೋರೇಗೌಡ, ನೀಲಾಮಣಿ, ಸೋಮಶೇಖರ್, ಧರ್ಮರಾಜು ಸೇರಿದಂತೆ ಸಾಹಿತ್ಯಸಕ್ತರುಪಾಲ್ಗೊಂಡಿದ್ದರು.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ