May 2, 2024

Bhavana Tv

Its Your Channel

ಕಿಕ್ಕೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಕಿಕ್ಕೇರಿ: ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಪಮಾನಿಸಿದ ಕೊಡಗು ಜಿಲ್ಲೆಯ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವAತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದರು.

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ನೇತೃತ್ವದಲ್ಲಿ ನೂರಾರು ಕಾಂಗ್ರೇಸ್ ಕಾರ್ಯಕರ್ತರು ರಸ್ತೆಗಿಳಿದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ವಿರುದ್ದ ದಿಕ್ಕರಾ ಘೋಷಣೆಗಳೊಂದಿಗೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು..

ನಂತರ ಕಿಕ್ಕೇರಿ ಸುರೇಶ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಹೋಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಆರ್ ಎಸ್ ಎಸ್ ಮುಖಂಡರು ಮಾಡಿ ಕಪ್ಪುಬಾವುಟ ಪ್ರದರ್ಶಿಸಿ ನಮ್ಮ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದು ಅವಮಾನಿಸಿರುವುದು ಖಂಡನೀಯ ಮಾಜಿ ಮಖ್ಯಮಂತ್ರಿಗಳಾದ ಸಿ.ಎಂ.ಸಿದ್ದರಾಮಯ್ಯ ಅವಮಾನಿಸಿರುವ ಕೃತ್ಯ ಜನಪ್ರತಿನಿಧಿಗಳಿಗೆ ಅವಮಾನಿಸಿದಂತಾಗಿದೆ. ಹಾಗಾಗಿ ಈ ಕೃತ್ಯವನ್ನುವ್ಯಸಗಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಮತ್ತು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಸಿದ್ದರಾಮಯ್ಯನವರ ಅಭಿಮಾನಿಗಳ ಬಳಗದವರು ಪ್ರತಿಭಟನೆ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೋಡಿಮರನಹಳ್ಳಿ ದೇವರಾಜು, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ರಾಮಕೃಷ್ಣೇಗೌಡ್ರು, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಸಣ್ಣಿಂಗೇಗೌಡ, ಪಿ.ಎಲ್.ಡಿ ಬ್ಯಾಕ್ ಮಾಜಿ ಅದ್ಯಕ್ಷ ಎಲ್ ಪಿ ನಂಜಪ್ಪ,ಗ್ರಾಮ ಪಂಚಾಯತಿ ಅಧ್ಯಕ್ಷ ರಘು, ಸದಸ್ಯರಾದ ಶ್ರೀಧರ, ಕೃಷಿ ಪತ್ತಿನ ಸಂಘದ ನಿರ್ದೇಶಕ ತಾರನಾಥ್, ಮುಖಂಡರಾದ ಸೊಳ್ಳೇಪುರ ಜಯರಾಮು, ಸಾಸಲು ಈರಪ್ಪ, ಜಾನೇಗೌಡ್ರು, ಸಾಯಿ ಸುಮಿತ್, ಮಂದಾಕಿಣಿ ಚೇತನ್, ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಯಿಸಿದರು

ವರದಿ: ಶಂಭು ಕಿಕ್ಕೇರಿ.

error: