December 22, 2024

Bhavana Tv

Its Your Channel

ಕೊರೋನಾ ವೈರಾಣು ಹರಡುವಿಕೆ ನಿಯಂತ್ರಣ ಹಾಗೂ ಕೈಗೊಳ್ಳಬೇಕಾದ ಕ್ರಮದ ಕುರಿತು ಸಚಿವರಿಂದ ಸಭೆ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಕೊರೋನಾ ವೈರಾಣು ಹರಡುವಿಕೆ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಾಲೋಚನಾ ಸಭೆಯು ನಡೆಯಿತು .ಕೊರೋನಾ ಸೋಂಕು ಪತ್ತೆಯಾಗಿ ಸೀಲ್ ಡೌನ್ ಆಗಿರುವ ತಾಲ್ಲೂಕಿನ ಜಾಗಿನಕೆರೆ ಮತ್ತು ರಾಜಘಟ್ಟ ಗ್ರಾಮಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಂಡ ಮುಂಜಾಗ್ರತ ಕ್ರಮಗಳ ಮಾಹಿತಿಯನ್ನು ಉಪವಿಭಾಗಾಧಿಕಾರಿ ವಿ.ಆರ್.ಶೈಲಜಾ, ತಹಶೀಲ್ದಾರ್ ಶಿವಮೂರ್ತಿ ಅವರಿಂದ ಪಡೆದುಕೊಂಡರು. ತಾಲೂಕಿಗೆ ಮುಂಬೈ ಸೇರಿದಂತೆ ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯದಿಂದ ಆಗಮಿಸಿರುವ ಸಾರ್ವಜನಿಕರ ಮಾಹಿತಿಯನ್ನು ಸಂಗ್ರಹಿಸಲು ಶಿಕ್ಷಕರನ್ನು ನಿಯೋಜಿಸಲಾಗಿದ್ದು ೫೦ ವರ್ಷ ಮೀರಿರುವವರು ಹಾಗೂ ಮಹಿಳೆಯರನ್ನು ಹೊರತುಪಡಿಸಿ ಕರ್ತವ್ಯಕ್ಕೆ ನಿಯೋಜಿಸಬೇಕು ಎನ್ನುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಮೇಗೌಡರ ಮನವಿಗೆ ಸ್ಪಂದಿಸಿದ ಸಚಿವರು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಅವರೊಂದಿಗೆ ಸಮಾಲೋಚನೆ ನಡೆಸಿ ಹೊರಗಿನಿಂದ ತಾಲ್ಲೂಕಿನೊಳಗೆ ನುಸುಳಿರುವ ಜನರ ಪತ್ತೆಯನ್ನು ಶಿಕ್ಷಕರು ಎಚ್ಚರಿಕೆಯಿಂದ ಮಾಡಿ ಮಾಹಿತಿಯನ್ನು ತಹಶೀಲ್ದಾರ್ ಮತ್ತು ತಾಲ್ಲೂಕು ವೈದ್ಯಾಧಿಕಾರಿಗಳಿಗೆ ನೀಡುವಂತೆ ಸೂಚಿಸಿದರು. ಕೊರೋನಾ ಸೋಂಕು ಪತ್ತೆಯಾಗಿದ್ದು ಕಂಟೋನ್ಮೆAಟ್ ಜೋನ್ ಆಗಿ ಸೀಲ್ ಆಗಿರುವ ಜಾಗಿನಕೆರೆ ಮತ್ತು ರಾಜಘಟ್ಟ ಗ್ರಾಮಗಳ ಜನರಿಗೆ ಆರೋಗ್ಯದ ಬಗ್ಗೆ ಎಚ್ಚರ ವಹಿಸುವ ಜೊತೆಗೆ ಕೊರೋನಾ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ತಂಡಕ್ಕೆ ನಿರ್ದೇಶನ ನೀಡಿದರು…

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಪಂಚಾಯತಿ ಸಿಇಓ ಕೆ.ಯಾಲಕ್ಕಿಗೌಡ, ಪಾಂಡವಪುರ ಎಸಿ ಶೈಲಜಾ, ತಹಶೀಲ್ದಾರ್ ಶಿವಮೂರ್ತಿ, ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್, ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕಿ ಮೇನಕಾದೇವಿ, ಸಮಾಜಕಲ್ಯಾಣಾಧಿಕಾರಿ ಡಾ.ಮನುಕುಮಾರ್, ಬಿಸಿಎಂ ಅಧಿಕಾರಿ ವೆಂಕಟೇಶ್ ಮುಖಂಡರಾದ ಶಾಮಿಯಾನತಿಮ್ಮೇಗೌಡ, ವಿನೋದ್ ಕುಮಾರ್, ಪ್ರವೀಣ್, ಡಾ.ಕೆ.ಎಸ್.ರಾಜೇಶ್, ಸತೀಶ್ ವೀರಶೈವ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಕೊರೋನಾ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅಗತ್ಯ ಮಾಹಿತಿಯನ್ನು ನೀಡಿದರು.

error: