
ಕೊರೋನಾ ಮಹಾಮಾರಿಯ ಅಟ್ಟಹಾಸದ ಹಿನ್ನೆಲೆಯಲ್ಲಿ ಸಂಕಷ್ಠದಲ್ಲಿರುವ ಬಡಜನರು ಹಾಗೂ ನಿರ್ಗತಿಕರಿಗೆ ಕೃಷ್ಣರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಲ್ಲಿ ನೀಡಿದ ಜೀವನಾವಶ್ಯಕ ವಸ್ತುಗಳನ್ನು ಒಳಗೊಂಡಿರುವ ಆಹಾರ ಪದಾರ್ಥಗಳ ಕಿಟ್ ಗಳನ್ನು ರಾಜ್ಯದ ತೋಟಗಾರಿಕೆ, ರೇಷ್ಮೆ, ಪೌರಾಡಳಿತ ಖಾತೆಗಳ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ವಿತರಿಸಿದರು
ಕೊರೋನಾ ಹಿನ್ನೆಲೆಯಲ್ಲಿ ಇಡೀ ದೇಶವೇ ಸಂಕಷ್ಠದಲ್ಲಿದೆ. ಬಡಜನರು ಹಾಗೂ ಕೃಷಿಕೂಲಿ ಕಾರ್ಮಿಕರಿಗೆ ದುಡಿಮೆ ಮಾಡಲು ಸಾಧ್ಯವಾಗದೇ ಮನೆಗಳಲ್ಲಿಯೇ ಹೌಸ್ ಲಾಕ್ ಆಗಿದ್ದಾರೆ. ಆದ್ದರಿಂದ ತೀವ್ರವಾದ ತೊಂದರೆಯಲ್ಲಿರುವ ಬಡಜನರಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮಭೂಷಣ ಡಾ.ವೀರೇಂದ್ರಹೆಗಡೆ ಅವರ ಆಶಯದಂತೆ ಉಚಿತವಾಗಿ ಅಕ್ಕಿ, ಬೇಳೆ, ಸಕ್ಕರೆ, ರವೆ, ಮಸಾಲೆ ಪದಾರ್ಥಗಳು, ಉಪ್ಪು, ಸೋಪು ಸೇರಿದಂತೆ ಜೀವನಾವಶ್ಯಕ ವಸ್ತುಗಳನ್ನು ಒಳಗೊಂಡಿರುವ ೧೦೦ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಇಂದು ಪಟ್ಟಣದ ಯೋಜನಾ ಕಛೇರಿಯಲ್ಲಿ ಸಾಂಕೇತಿಕವಾಗಿ ಬಡವರಿಗೆ ಆಹಾರಧಾನ್ಯಗಳ ಕಿಟ್ ಗಳನ್ನು ವಿತರಿಸಿ ನಂತರ ಗ್ರಾಮಗಳಿಗೆ ತೆರಳಿ ಮನೆಮನೆಗೆ ಫುಡ್ ಕಿಟ್ ಗಳನ್ನು ವಿತರಿಸಲಿದ್ದಾರೆ..ಧರ್ಮಸ್ಥಳ ಸಂಸ್ಥೆಯ ಸಮಾಜಮುಖಿ ಕೆಲಸವು ಇಡೀ ನಾಗರಿಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಶ್ಲಾಘಿಸಿದ ಸಚಿವ ನಾರಾಯಣಗೌಡ ನಾನು ಯಾವುದೇ ಜನಪರವಾದ ಕೆಲಸವನ್ನು ಆರಂಬಿಸಬೇಕಾದರೆ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥಸ್ವಾಮಿಗೆ ಪೂಜೆ ಸಲ್ಲಿಸಿ ಕಾರ್ಯಪ್ರವೃತ್ತನಾಗುತ್ತಿದ್ದೇನೆ ಎಂದು ಅಭಿಮಾನದಿಂದ ಹೇಳಿದರು..
ಈ ಸಂದರ್ಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ವಿ.ಆರ್.ಶೈಲಜಾ, ತಹಶೀಲ್ದಾರ್ ಎಂ.ಶಿವಮೂರ್ತಿ, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಮಂಡ್ಯ ಜಿಲ್ಲಾ ಜನಜಾಗೃತಿ ಹೋರಾಟ ಸಮಿತಿಯ ಮಾಜಿಅಧ್ಯಕ್ಷ ಡಾ.ಕೆ.ಎಸ್.ರಾಜೇಶ್, ಯೋಜನಾಧಿಕಾರಿ ಮಮತಾಶೆಟ್ಟಿ, ಕೃಷಿ ಅಧಿಕಾರಿ ನಿಂಗಪ್ಪ ಅಗಸರ್, ಮೇಲ್ವಿಚಾರಕರಾದ ನಳಿನಾಕ್ಷಿ, ರಾಜಪ್ಪ ಸೇರಿದಂತೆ ಸೇವಾಪ್ರತಿನಿಧಿಗಳು, ಸ್ವಯಂ ಸೇವಕರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು..
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ