October 5, 2024

Bhavana Tv

Its Your Channel

ಕೊರೋನಾ ಸೋಂಕು ಪತ್ತೆಯಾಗಿ ಸೀಲ್ ಡೌನ್ ಆಗಿರುವ ಜಾಗಿನಕೆರೆ ಮತ್ತು ರಾಜಘಟ್ಟ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ತಾಲ್ಲೂಕಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿ ಸೀಲ್ ಡೌನ್ ಆಗಿರುವ ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ರಾಜಘಟ್ಟ ಗ್ರಾಮಕ್ಕೆ ರಾಜ್ಯದ ಪೌರಾಡಳಿತ, ತೋಟಗಾರಿಕೆ, ರೇಷ್ಮೆ ಖಾತೆಗಳ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿ ಜನಸಾಮಾನ್ಯರ ಕುಂದುಕೊರತೆಗಳು ಹಾಗೂ ಸಮಸ್ಯೆಗಳನ್ನು ಆಲಿಸಿ ಸುರಕ್ಷತಾ ಮಾಸ್ಕುಗಳನ್ನು ವಿತರಿಸಿದರು..ರಾಜಘಟ್ಟ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಗ್ರಾಮಸ್ಥರು ಅಗತ್ಯ ಆರೋಗ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕೊರೋನಾ ಮಹಾಮಾರಿಯ ಸೋಂಕು ಹರಡದಂತೆ ಎಚ್ಚರ ವಹಿಸಬೇಕು ಎಂದು ಕೈಮುಗಿದು ಮನವಿ ಮಾಡಿದ ಸಚಿವ ಡಾ.ನಾರಾಯಣಗೌಡ ಗ್ರಾಮಸ್ಥರಿಗೆ ತೊಂದರೆಯಾಗದAತೆ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಎಲ್ಲಾ ರೀತಿಯ ಸವಲತ್ತುಗಳನ್ನು ಒದಗಿಸಿಕೊಡಲಾಗುತ್ತದೆ. ಗ್ರಾಮಸ್ಥರು ಸಂಕಷ್ಠದ ಸಮಯದಲ್ಲಿ ತಾಲ್ಲೂಕು ಆಡಳಿತದೊಂದಿಗೆ ಸಹಕರಿಸಬೇಕು ಎಂದು ಹೇಳಿದರು… ಈ ಸಂದರ್ಭದಲ್ಲಿ ಸಚಿವರೊಂದಿಗೆ ಮಂಡ್ಯ ಜಿಲ್ಲಾ ಪಂಚಾಯತಿ ಸಿಇಒ ಕೆ.ಯಾಲಕ್ಕಿಗೌಡ, ಪಾಂಡವಪುರ ಉಪವಿಭಾಗಾಧಿಕಾರಿ ವಿ.ಆರ್.ಶೈಲಜಾ, ತಹಶೀಲ್ದಾರ್ ಎಂ.ಶಿವಮೂರ್ತಿ, ನಾಗಮಂಗಲ ಡಿವೈಎಸ್ ಪಿ ಕೆ.ಬಿ.ವಿಶ್ವನಾಥ್, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎನ್.ಚಂದ್ರಮೌಳಿ, ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕಿ ಮೇನಕಾದೇವಿ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್, ಸಮಾಜಸೇವಾ ಕಾರ್ಯಕರ್ತ ಅರವಿಂದರಾವ್, ಸಚಿವರ ಆಪ್ತಸಹಾಯಕರಾದ ದಯಾನಂದ, ಕಿಕ್ಕೇರಿಕುಮಾರ್, ಪಟ್ಟಣ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಮತ್ತಿತರರು ಉಪಸ್ಥಿತರಿದ್ದರು…

error: