July 14, 2024

Bhavana Tv

Its Your Channel

ಕೊರೋನಾ ವಾರಿಯರ್ಸ್ಗೆ ಕಿಟ್ ವಿತರಿಸಿದ ಸಚಿವ ಡಾ.ನಾರಾಯಣಗೌಡ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಜೀವದ ಹಂಗು ತೊರೆದು ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಹಗಲಿರುಳೆನ್ನದೇ ಅರ್ಪಣಾ ಮನೋಭಾವದಿಂದ ದುಡಿಯುತ್ತಿರುವ ಕೊರೋನಾ ವಾರಿಯರ್ಸ್ ಆದ ಆಶಾ ಕಾರ್ಯಕರ್ತೆಯರಿಗೆ ಶ್ರೀರಂಗಪಟ್ಟಣದ ಸನ್ ಪ್ಯೂರ್ ರೀಫೈಂಡ್ ಆಯಿಲ್ ಕಂಪನಿಯ ಮಾಸಮ್ ಸೇವಾ ಟ್ರಸ್ಟ್ ಮತ್ತು ಕೃಷ್ಣರಾಜಪೇಟೆ ಪಟ್ಟಣದ ಶ್ರೀ ಮಲ್ಲಿಕಾರ್ಜುನ ಏಜೆನ್ಸಿಯ ಮಾಲೀಕರಾದ ಡಾ.ಕೆ.ಎಸ್.ರಾಜೇಶ್ ಅವರ ಸಹಯೋಗದಲ್ಲಿ ಜೀವನಾವಶ್ಯಕ ವಸ್ತುಗಳ ಆಹಾರ ಪಡಿತರ ಕಿಟ್ ಗಳನ್ನು ರಾಜ್ಯದ ಪೌರಾಡಳಿತ, ರೇಷ್ಮೆ, ತೋಟಗಾರಿಕೆ ಖಾತೆಗಳ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ವಿತರಿಸಿದರು …

ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ಫುಡ್ ಕಿಟ್‌ಗಳನ್ನು ವಿತರಿಸಿದ ಸಚಿವರು ಕೊರೋನಾ ಸಂಕಷ್ಠದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ಹಗಲಿರುಳೆನ್ನದೇ ಜೀವದ ಹಂಗು ತೊರೆದು ಕೊರೋನಾ ಹಾವಳಿಯನ್ನು ಮಟ್ಟಹಾಕಲು, ಜನಸಾಮಾನ್ಯರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ದುಡಿಯುತ್ತಿದ್ದಾರೆ. ಆಶಾ ಕಾರ್ಯಕರ್ತೆಯರ ಆರೋಗ್ಯ ಸುರಕ್ಷತೆಗೆ ಸರ್ಕಾರವು ಬದ್ಧವಾಗಿದೆ. ಆಶಾ ಕಾರ್ಯಕರ್ತೆಯರಿಗೆ ಜೀವವಿಮಾ ಸೌಲಭ್ಯವನ್ನು ಕಲ್ಪಿಸಿಕೊಡಲಾಗಿದೆ. ಆಶಾ ಕಾರ್ಯಕರ್ತರೊಂದಿಗೆ ಅನುಚಿತವಾಗಿ ವರ್ತಿಸುವ, ಅವರ ಕೆಲಸಕ್ಕೆ ಅಡ್ಡಿಪಡಿಸುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಆದ್ದರಿಂದ ಆಶಾ ಕಾರ್ಯಕರ್ತರು ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಕೆಲಸ ಮಾಡಿ ಕೊರೋನಾ ಹಾವಳಿಯನ್ನು ತಡೆಗಟ್ಟಲು ಮುಂದಾಗಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು… ಈ ಸಂದರ್ಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ವಿ. ಆರ್.ಶೈಲಜಾ, ತಹಶೀಲ್ದಾರ್ ಎಂ.ಶಿವಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಹೆಚ್.ಟಿ.ಹರೀಶ್, ತೆಂಡೇಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಸಾದ್, ಸರ್ಕಲ್ ಇನ್ಸ್ ಪೆಕ್ಟರ್ ಸುಧಾಕರ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ, ಸಬ್ ಇನ್ಸ್ ಪೆಕ್ಟರ್ ಗಳಾದ ಬಿ.ಪಿ.ಬ್ಯಾಟರಾಯಗೌಡ, ಡಿ.ಲಕ್ಷ್ಮಣ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು…

error: