April 10, 2025

Bhavana Tv

Its Your Channel

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಗೆಲುವು ಸಾಧಿಸಿದ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮ

ಕಿಕ್ಕೇರಿ: ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಗೆಲುವು ಸಾದಿಸಿದ ಹಿನ್ನಲೆ ಕಿಕ್ಕೇರಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು

ನAತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್ ಮಾತನಾಡಿ ನಮ್ಮ ಪಕ್ಷದ ಸೋಲಿಲ್ಲದ ಸರದಾರ ಎಂದೇ ಬಿರುದು ಪಡೆದರು ಮುತ್ಸದ್ದಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ರಾಜ್ಯ ಹಾಗೂ ರಾಷ್ಟ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಉಂಟು ಮಾಡಿದೆ. ಅವರ ಅವಧಿಯಲ್ಲಿ ಪಕ್ಷ ಬೇರುಮಟ್ಟದಿಂದ ಬಲಗೊಳ್ಳುವ ಹಾಗೂ ರಾಜ್ಯ ಮತ್ತು ರಾಷ್ಟ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವ ವಿಶ್ವಾಸ ಇದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಲ್ ದೇವರಾಜು, ಪುರಸಭೆ ಸದಸ್ಯ ಡಿ ಪ್ರೇಮ್ ಕುಮಾರ್, ಕಾಂಗ್ರೆಸ್ ಜಿಲ್ಲಾ ವಕ್ತಾರರಾದ ರಾಮಕೃಷ್ಣೇಗೌಡ್ರು, ಲಕ್ಷ್ಮೀಪುರ ಗ್ರಾಮ ಪಂಚಾಯತಿ ಅಧ್ಯಕ್ಷ ರಘು, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಜಯರಾಮು, ಲಕ್ಷ್ಮೀಪುರ ಚಂದ್ರೇಗೌಡ, ಕೃಷಿ ಪತ್ತಿನ ಸಹಾಕರ ಸಂಘದ ನಿರ್ದೇಶಕ ತಾರನಾಥ್, ಮುಖಂಡರಾದ ಸಾಸಲು ಈರಪ್ಪ, ಪುಟ್ಟೇಗೌಡ್ರು, ಜಾನೇಗೌಡ್ರು, ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರು ಇದ್ದರು..

ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ

error: