
ಕಿಕ್ಕೇರಿ: ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯ ಕಾರ್ಯಕ್ರಮಕ್ಕೆ ಹೆಚ್ ಟಿ ಮಂಜು ನೇತೃತ್ವದಲ್ಲಿ ಸಾವಿರಾರು ಜೆ.ಡಿ.ಎಸ್ ಪಕ್ಷದ ಕಾರ್ಯಕರ್ತರು ಮುಳಬಾಗಿನನತ್ತ ಪ್ರಯಾಣ ಬೆಳಿಸಿದರು
ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆಗೆ ಕೃಷ್ಷರಾಜಪೇಟೆ ತಾಲ್ಲೂಕಿನಿಂದ 100 ಕ್ಕೂ ಹೆಚ್ಚು ಬಸ್ ಗಳಲ್ಲಿ ಸಾವಿರಾರು ಪಕ್ಷದ ಕಾರ್ಯಕರ್ತರು ಹೆಚ್ ಟಿ ಮಂಜು ನೇತ್ರತ್ವದಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ರಥಯಾತ್ರೆ ಪ್ರಯಾಣ ಬೆಳಸಿ ಕುಮಾರ ಸ್ವಾಮಿಯವರ ಪಂಚರತ್ನ ಕಾರ್ಯಕ್ರಮಕ್ಕೆ ಭಾಗವಹಿಸಿ ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ ಎಂದು ತಿಳಿಸಿದರು
ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಹೆಚ್ ಟಿ ಮಂಜು ರವರು ಮಾತನಾಡಿ ಕರ್ನಾಟಕ ಭಾಗದಲ್ಲಿ ಈಗಾಗಲೇ ಸಂಘಟನೆ ಆರಂಭವಾಗಿದ್ದು ಕರ್ನಾಟಕ ಭಾಗದಲ್ಲಿ ಜೆಡಿಎಸ್ ಅಸ್ತಿತ್ವ ಏನೂ ಎಂಬುದನ್ನು ಈ ಕಾರ್ಯಕ್ರಮಗಳ ಮೂಲಕ ತೋರಿಸಲಾಗುತ್ತದೆ ಅಲ್ಲದೆ ಕುಮಾರಣ್ಣ ನವರು ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಹಲವು ಯೋಜನೆಗಳನ್ನು ತಂದಿದ್ದು ಮುಂದೆ ಬರುವ ವಿಧಾನ ಸಭಾ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದ್ದು ಎಲ್ಲಾ ಕಾರ್ಯಕರ್ತರು ಮತ್ತು ಸಾರ್ವಜನಿಕರು ಕೈ ಜೋಡಿಸಬೇಕು ಕುಮಾರಣ್ಣ ನವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ನೋಡಬೇಕು ಎಂದರು..
ಈ ಸಂದರ್ಭದಲ್ಲಿ ತಾಲ್ಲೂಕು ಜೆ.ಡಿ.ಎಸ್ ಘಟಕದ ಅಧ್ಯಕ್ಷರಾದ ಜಾನಕಿರಾಮು, ಮುಖಂಡರಾದ ಮೋಹನ್, ಐನೋರಹಳ್ಳಿ ಮಲ್ಲೇಶ್, ಕಾಯಿ ಮಂಜೇಗೌಡ, ಲೋಕೇಶ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಇದ್ದರು…
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ