ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿರುವ ಸುಮಾರು ೮೦ಕ್ಕೂ ಹೆಚ್ಚು ಬಡ ಜನರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಯೋಜನೆ ಸಂಸ್ಥೆಯಿoದ ಕಿಟ್ ವಿತರಿಸಲಾಯಿತು..ಪಟ್ಟಣದ ವಿಸಿ ಕಾಲೂನಿಯಲ್ಲಿರುವ ಶ್ರೀ ಧರ್ಮಸ್ಥಳ
ಗ್ರಾಮೀಣ ಯೋಜನೆ ಸಂಸ್ಥೆಯ ಕಚೇರಿಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರ ಫಲಾನುಭವಿ ಗೌರಮ್ಮ, ಸಾಕಮ್ಮ ಮತ್ತು ಭಾರತಿ ಅವರಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,. ಇನ್ಸ್ಪೆಕ್ಟರ್ ರವೀಂದ್ರ ಮಾತನಾಡಿ ಗ್ರಾಮೀಣ ಬಡಜನತೆಯನ್ನು ಗುರುತಿಸಿ ಅವರಿಗೆ ಸಹಾಯ ಮಾಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದರು…ಪಾoಡವಪುರ ತಾಲ್ಲೂಕಿನ ತಹಸಿಲ್ದಾರ್ ಪ್ರಮೋದ್ ಎಲ್.ಪಾಟೀಲ್ ಮಾತನಾಡಿ. ಕರೋನ ಸೋಂಕು ಹರಡಬಾರದೆಂದು ಸರ್ಕಾರ ಲಾಕ್‌ಡೌನ್ ಘೋಷಿಸಿದೆ ಇದರಿಂದ ಧರ್ಮಸ್ಥಳದಲ್ಲಿ ಅನ್ನ ದಾಸೋಹ ನಿಂತಿದ್ದರೂ ಸಂಸ್ಥೆಯವರು ಗ್ರಾಮೀಣ ಪ್ರದೇಶದ ಜನರಿಗೆ ಕಿಟ್ ವಿತರಿಸುವ ಮೂಲಕ ರಾಜ್ಯದಲ್ಲಿ ಅನ್ನ ದಾಸೋಹ ನಿರಂತರವಾಗಿ ನಡೆಯುವಂತೆ ಮಾಡಿದ್ದಾರೆ ಎಂದರು…
ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ. ಸಿ.ಎ. ಅರವಿಂದ್ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಚ್.ಎನ್. ಮಂಜುನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಯೋಜನೆ ಸಂಸ್ಥೆಯ ತಾಲ್ಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ.. ಜನ ಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ರಾಜಕುಮಾರ್, ದಿಲೀಪ್ ಮುಂತಾದವರು ಇದ್ದರು.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ