ಮಂಡ್ಯ: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಠದಲ್ಲಿರುವ ವಿಶ್ವಕರ್ಮ ಸಮಾಜದ ಬಂಧುಗಳಿಗೆ ಇತರೆ ಕಾಯಕ ವರ್ಗದ ಸಮುದಾಯಗಳಿಗೆ ಘೋಷಿಸಿರುವಂತೆ ವಿಶೇಷ ಪ್ಯಾಕೇಜ್ ಘೋಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೃಷ್ಣರಾಜಪೇಟೆ ತಾಲ್ಲೂಕು ವಿಶ್ವಕರ್ಮ ಸಮಾಜದ ಮುಖಂಡ ಕುಮಾರಸ್ವಾಮಿ ಆಗ್ರಹಿಸಿದರು.
ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿದ ಸಮಾಜದ ಮುಖಮಡರು ರಾಜ್ಯಾದ್ಯಂತ ಸುಮಾರು ೪೦ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿರುವ ವಿಶ್ವಕರ್ಮ ಸಮಾಜದ ಬಂಧುಗಳು ರೈತಕುಲ ಸೇರಿದಂತೆ ಇಡೀ ಸಮಾಜಕ್ಕೆ ಅತ್ಯಗತ್ಯವಾಗಿ ಬೇಕಾದ ಪಂಚಕಸುಬುಗಳನ್ನು ಮಾಡುತ್ತಿದ್ದಾರೆ. ಮರಗೆಲಸ, ಚಿನ್ನಬೆಳ್ಳಿಯ ಕೆಲಸ, ಕಬ್ಬಿಣದ ಕೆಲಸ, ಶಿಲ್ಪಕಲೆ ಮತ್ತು ಕಂಚಿನ ತಾಮ್ರದ ಶಿಲ್ಪಗಳ ಕೆಲಸವನ್ನು ಮಾಡುತ್ತಾ ಸಮಾಜಕ್ಕೆ ಅಗತ್ಯವಾಗಿ ಬೇಕಾದ ಮಾರ್ಗದರ್ಶನ ಮಾಡುತ್ತಾ ಸಮಾಜವನ್ನು ಮುನ್ನಡೆಸುತ್ತಿರುವ ವಿಶ್ವಕರ್ಮ ಸಮಾಜವೇ ಕೊರೋನಾ ಮಹಾಮಾರಿಯ ಅಟ್ಟಹಾಸದಿಂದ ಸಂಕಷ್ಢಕ್ಕೆ ಸಿಲುಕಿದೆ. ಆದ್ದರಿಂದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಸಮಾಜದ ಇತರೆ ದುಡಿಯುವ ವರ್ಗಗಳು ಮತ್ತು ಕಾಯಕ ಸಮುದಾಯಕ್ಕೆ ಘೋಷಿಸಿರುವಂತೆ ವಿಶ್ವಕರ್ಮ ಜನಾಂಗದ ಬಂಧುಗಳಿಗೂ ವಿಶೇಷ ಪ್ಯಾಕೇಜ್ ಘೋಷಿಸಿ ಆರ್ಥಿಕ ಸಂಕಷ್ಠದಲ್ಲಿರುವ ವಿಶ್ವಕರ್ಮ ಜನಾಂಗದ ಬಂಧುಗಳಿಗೆ ಸಹಾಯ ಮಾಡಬೇಕು ಎಂದು ಸಮಾಜದ ಮುಖಂಡ ಕುಮಾರಸ್ವಾಮಿ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ವಿಶ್ವಕರ್ಮ ಸಮಾಜದ ಮುಖಂಡರಾದ ರವಿ, ವಾಸುದೇವ್, ಕೆ.ಜೆ.ನಾಗರಾಜು ಮತ್ತಿತರರು ಉಪಸ್ಥಿತರಿದ್ದರು…
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ