May 30, 2023

Bhavana Tv

Its Your Channel

ಕೊರೋನಾ ವಾರಿಯರ್ಸ್ನಂತೆ ದುಡಿದ ಆಶಾ ಕಾರ್ಯಕರ್ತೆಯರಿಗೆ ಆಯುಷ್ ಆರೋಗ್ಯ ಇಲಾಖೆಯ ವತಿಯಿಂದ ಚ್ಯವನಪ್ರಾಶ ಔಷಧ ವಿತರಣೆ.

ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಅಕ್ಕಿಹೆಬ್ಬಾಳು ಹೋಬಳಿಯ ಕೊರೋನಾ ಸಂಕಷ್ಠದ ಸಮಯದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ನಿಸ್ವಾರ್ಥ ಸೇವೆ
ಸಲ್ಲಿಸುತ್ತಿರುವ ನೂರಾರು ಆಶಾ ಕಾರ್ಯಕರ್ತೆಯರಿಗೆ ಚ್ಯವನಪ್ರಾಶ ಮತ್ತು ಸಂಜೀವಿನಿ ವಟಿಯನ್ನು ತಾಲ್ಲೂಕು ಆಯುಷ್ ವೈದ್ಯಾಧಿಕಾರಿ ಡಾ.ಲೋಕೇಶ್ ಅವರ ನೇತೃತ್ವದಲ್ಲಿ ವಿತರಿಸಲಾಯಿತು…

ಕೊರೋನಾ ಸಂಕಷ್ಠದ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಹಗಲಿರುಳೆನ್ನದೇ ಆಶಾ ಕಾರ್ಯಕರ್ತೆಯರು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತಿದ್ದಾರೆ… ಕೊರೋನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯ ಸಂವರ್ಧನೆ ಮಾಡುವ ಆಯುರ್ವೇದೀಯ ಗುಣಗಳನ್ನು ಹೊಂದಿರುವ ಚ್ಯವನಪ್ರಾಶ ಮತ್ತು ಸಂಜೀವಿನಿ ವಟಿ ಔಷಧಗಳನ್ನು ಜಿಲ್ಲೆಯ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ವಿತರಿಸಲಾಗುತ್ತಿದೆ…ನಿಯಮಿತವಾಗಿ ಈ ಆಯುರ್ವೇದ ಔಷಧಗಳನ್ನು ಬಳಸಿಕೊಂಡು ಆರೋಗ್ಯ ಸಂವರ್ಧನೆ ಮಾಡಿಕೊಳ್ಳಬೇಕು ಎಂದು ಡಾ.ಲೋಕೇಶ್ ಮನವಿ ಮಾಡಿದರು….
ಈ ಸಂದರ್ಭದಲ್ಲಿ ವೈದ್ಯರುಗಳಾದ ಸುಬ್ರಹ್ಮಣ್ಯ, ಚಂದ್ರಶೇಖರ್, ಡಾ.ಆಶಾಲತ ಸೇರಿದಂತೆ ಅಕ್ಕಿಹೆಬ್ಬಾಳು ಹೋಬಳಿಯ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

About Post Author

error: