ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಐಕನಹಳ್ಳಿ ಗ್ರಾಮ ಪಂಚಾಯಿತಿ ಹಿಂದಿನ ಅಧ್ಯಕ್ಷ ಅಂಕನಹಳ್ಳಿ ಮಂಜೇಗೌಡ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ನಡೆದ ಇಂದು ಚುನಾವಣೆಯಲ್ಲಿ ಅಂಬುಜ ಉದಯಶಂಕರ್ ಹೊರತುಪಡಿಸಿ ಉಳಿದ ಯಾವ ಸದಸ್ಯರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಸ್ಥಾನಕ್ಕೆ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಕಾರ್ಯನಿರ್ವಹಿಸಿದ ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್ ಘೋಷಿಸಿದರು.
ಬಳಿಕ ಮಾತನಾಡಿದ ತಾಲ್ಲೂಕು ಪಂಚಾಯಿತಿ ಸದಸ್ಯ ಕೃಷ್ಣೆಗೌಡ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ ಸ್ವಚ್ಛಗೊಳಿಸುವ ಕಾರ್ಯ, ಕುಡಿಯುವ ನೀರು, ಪ್ರತಿಯೊಬ್ಬರಿಗೂ ವಿದ್ಯುತ್ ಮತ್ತು ಮನೆ ಇಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ಶ್ರಮವಹಿಸಬೇಕು,ಯಾರಿಗೂ ಅಧಿಕಾರ ಶಾಶ್ವತವಲ್ಲ ನಾವು ಮಾಡುವ ಕೆಲಸಗಳು ಶಾಶ್ವತವಾಗಿರುತ್ತವೆ,ಗ್ರಾ.ಪಂ.ಗೆ ಇಂದು ನೇರವಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ಸಾಕಷ್ಟು ಅನುದಾನ ಬರುತ್ತಿದೆ.ಗ್ರಾಮಗಳ ಸಮಗ್ರ ಅಭಿವದ್ಧಿಯ ಜತೆಗೆ ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ಮಾದರಿ ಗ್ರಾಮ ಪಂಚಾಯಿತಿ ನಿರ್ಮಿಸುವಲ್ಲಿ ಅಧ್ಯಕ್ಷರ ಜತೆ ಪ್ರತಿಯೊಬ್ಬ ಸದಸ್ಯರು ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಮತ್ತು ತಾ.ಪಂ.ಮಾಜಿ ಅಧ್ಯಕ್ಷ ರಾಮೇಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯ ಐಕನಹಳ್ಳಿ ಕೃಷ್ಣೆಗೌಡ್ರು, ಗ್ರಾಮ ಪಂಚಾಯಿತಿ ಮಾಜಿ ಅದ್ಯಕ್ಷ ಉದಯ್ ಶಂಕರ್, ಆನೆಗೊಳ ಕೃಷಿ ಪತ್ರಿನ ಸಹಕಾರ ಸಂಘದ ಮಾಜಿ ಅದ್ಯಕ್ಷ ಮಧು, ಮುಖಂಡರಾದ ದೊಡ್ಡತರಹಳ್ಳಿ ಶಿಶುಪಾಲು, ಚಿಕ್ಕತರಹಳ್ಳಿ ರಾಮಕೃಷ್ಣೇಗೌಡ್ರು, ಸಾಸಲು ಮೊಗಣ್ಣ, ಗ್ರಾಮ ಪಂಚಾಯತಿ ಸದಸ್ಯರಾದ ಕುಮಾರ್, ಮಂಜೇಗೌಡ, ನಂಜುAಡೇಗೌಡ, ಸುವರ್ಣ, ಈರಾಜು, ದೇವರಾಜು, ಪ್ರಸನ್ನ, ಪಲ್ಲವಿ, ಬಾಗ್ಯಮ್ಮ, ಶಂಕರ, ಸುಮಿತ್ರ, ಸುಧಾ ಕವಿತ, ಪಿ.ಡಿ.ಓ ವಿಜಯ ಕುಮಾರ್ ಸೇರಿದಂತೆ ಮತ್ತಿತ್ತರರು ಇದ್ದರು…
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ