October 5, 2024

Bhavana Tv

Its Your Channel

ಕೆ.ಆರ್.ಪೇಟೆಯಲ್ಲಿ ಹೋಂ ಕ್ವಾರಂಟೈನ್‌ನಲ್ಲಿರುವವರಿಗೆ ಬಿಜೆಪಿಯಿಂದ ಕಿಟ್ ವಿತರಣೆ

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ೧೬ ವಿವಿಧ ಸಾಂಸ್ಥಿಕ ಕೇಂದ್ರಗಳಲ್ಲಿ ಹೋಂ ಕ್ವಾರಂಟೈನ್ ಆಗಿರುವ ೧೧೫೦ಕ್ಕೂ ಹೆಚ್ಚಿನ ಮುಂಬೈ ಕನ್ನಡಿಗರಿಗೆ ಬಿಜೆಪಿ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರ ಸಂಯುಕ್ತಾಶ್ರಯದಲ್ಲಿ ತಯಾರಿಸಿದ ಕಿಟ್ ಗಳನ್ನು ತಹಶೀಲ್ದಾರ್ ಎಂ. ಶಿವಮೂರ್ತಿ ವಿತರಿಸಿದರು .
ಕ್ವಾರಂಟೈನ್ ಕೇಂದ್ರಗಳಲ್ಲಿ ಹೋಂ ಕ್ವಾರಂಟೈನ್ ಆಗಿರುವ ಮಹಿಳೆಯರು, ಮಕ್ಕಳು ಹಾಗೂ ಪುರುಷರಿಗೆ ದಿನಬಳಕೆಯ ಅಗತ್ಯ ವಸ್ತುಗಳು, ಮಾಸ್ಕಗಳು ಸ್ಯಾನಿಟೈಸರ್ ಸೇರಿದಂತೆ ವಿವಿಧ ಜೀವನಾವಶ್ಯಕ ವಸ್ತುಗಳ ಕಿಟ್ ಗಳನ್ನು ಪ್ರತ್ಯೇಕವಾಗಿ ತಯಾರಿಸಿ ೧೧೫೦ ಕಿಟ್ ವಿತರಿಸಲಾಯಿತು. ನಂತರಮಾತನಾಡಿದ ಸಚಿವ ನಾರಾಯಣಗೌಡ ನಾಡಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸುಪುತ್ರರಾದ ಯುವಸಾರಥಿ ವಿಜಯೇಂದ್ರ ಅವರು ಬಿಜೆಪಿ ಯುವ ಘಟಕದ ನೇತೃತ್ವದಲ್ಲಿ ೧೨೫೦ಕ್ಕೂ ಹೆಚ್ಚಿನ ದಿನಬಳಕೆ ವಸ್ತುಗಳ ಕಿಟ್ ಗಳನ್ನು ನೀಡಿ ಉದಾರತೆ ಮೆರೆದಿದ್ದಾರೆ. ಇವರು ಈ ಮೂಲಕ ಸಾಮಾಜಿಕ ಕಳಕಳಿ ಹಾಗೂ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದರು.
ಸಮಾಜದಲ್ಲಿ ಉಳ್ಳವರು ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕುವ ನಿಟ್ಟಿನಲ್ಲಿ ತಮ್ಮ ಕೈಲಾದ ಸಹಾಯವನ್ನು ಮಾಡಬೇಕು. ಕೊರೋನಾ ಲಾಕ್ ಡೌನ್ ನಿಂದ ನೊಂದಿರುವ ಕೃಷಿಕೂಲಿ ಕಾರ್ಮಿಕರು, ಬೀದಿ ಬದಿಯ ವ್ಯಾಪಾರಿಗಳು ಹಾಗೂ ಕಡುಬಡವರಿಗೆ ತಮ್ಮ ಕೈಲಾದ ಸಹಾಯವನ್ನು ಮಾಡಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು…

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಬಿಜೆಪಿ ಯುವಘಟಕದ ಮಾಜಿಅಧ್ಯಕ್ಷ ಶರಣುಪಾಟೀಲ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್, ತಾಲ್ಲೂಕು ಸಮಾಜಕಲ್ಯಾಣಾಧಿಕಾರಿ ಡಾ.ಮನುಕುಮಾರ್, ಜಿಲ್ಲಾ ಪಂಚಾಯತಿ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಅರವಿಂದ್ ಪರಮೇಶ್, ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಪುರಸಭೆ ಸದಸ್ಯರಾದ ಹೆಚ್.ಆರ್.ಲೋಕೇಶ್, ಕೆ.ಆರ್.ಪ್ರಮೋದ್, ಗಿರೀಶ್, ಶುಭ ಗಿರೀಶ್, ಶೋಭಾದಿನೇಶ್, ಕಲ್ಪನಾ, ಸಚಿವರ ಆಪ್ತಸಹಾಯಕರಾದ ದಯಾನಂದ, ಕಿಕ್ಕೇರಿಕುಮಾರ್, ಮುಖಂಡರಾದ ಎಂ.ಪ್ರವೀಣ್, ವಿನೋದ್ ಕುಮಾರ್, ಸುಬ್ಬುಕೃಷ್ಣ, ಅರುಣ್ ಸತೀಶ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.

error: