March 29, 2024

Bhavana Tv

Its Your Channel

.. ಸಭೆಯಲ್ಲಿ ಬಿಸಿ ಬಿಸಿ ಚರ್ಚೆ, ಶಾಸಕ ಕೆ.ಸುರೇಶ್ ಗೌಡ ಮತ್ತು ಪುಟ್ಟರಾಜು ಹಾಗೂ ಸಚಿವ ನಾರಾಯಣಗೌಡರ ನಡುವೆ ವಾಗ್ಯುದ್ಧ.

ಮಂಡ್ಯ ; ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಕೋವಿಡ್-೧೯ ನಿಯಂತ್ರಣ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯು ನಡೆಯಿತು…
ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆoಕಟೇಶ್, ಜಿ.ಪಂ ಸಿಇಓ ಕೆ.ಯಾಲಕ್ಕಿಗೌಡ, ಎಸ್.ಪಿ ಪರಶುರಾಮ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡ ಸಭೆಗೆ ಕೋವಿಡ್ ನಿಯಂತ್ರಣ ಕುರಿತೂ ಅಗತ್ಯ ಮಾಹಿತಿ ನೀಡಿದರು…ಶಾಸಕರಾದ ಎಂ.ಶ್ರೀನಿವಾಸ್, ಸಿ.ಎಸ್.ಪುಟ್ಟರಾಜು, ಡಾ.ಅನ್ನದಾನಿ, ಕೆ.ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ ಮತ್ತು ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ಚರ್ಚೆಯಲ್ಲಿ ಭಾಗವಹಿಸಿದ್ದರು…
ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಬಗೆಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು, ಸೀಲ್ ಡೌನ್ ಆಗಿರುವ ಗ್ರಾಮಗಳ ಕಂಟೋನ್ಮೆoಟ್ ಜೋನ್ ಗಳಲ್ಲಿ ಜನರಿಗೆ ದೈನಂದಿನ ಕೆಲಸ ಕಾರ್ಯಗಳಿಗೆ ಯಾವುದೇ ತೊಂದರೆಯಾಗದoತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ನಾರಾಯಣಗೌಡ ನಿರ್ದೇಶನ ನೀಡಿದರು…ಅಪರ ಜಿಲ್ಲಾಧಿಕಾರಿ ಯೋಗೇಶ್, ಉಪವಿಭಾಗಾಧಿಕಾರಿಗಳಾದ ಸೂರಜ್, ವಿ.ಆರ್.ಶೈಲಜಾ ಕಂಟೋನ್ಮೆoಟ್ ಜೋನ್ ಗಳ ಕುರಿತು ಅಗತ್ಯ ಮಾಹಿತಿ ನೀಡಿದರು…ಕೋವಿಡ್ ನಿಯಂತ್ರಣ ಸಭೆಯಲ್ಲಿ ಶಾಸಕರಿಗೆ ಅಗತ್ಯ ಮಾಹಿತಿಯನ್ನು ನೀಡದ ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಶಾಸಕರು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.. ಸಭೆಯಲ್ಲಿ ಬಿಸಿ ಬಿಸಿ ಚರ್ಚೆಯು ನಡೆಯಿತು…ಶಾಸಕರಾದ ಕೆ.ಸುರೇಶ್ ಗೌಡ ಮತ್ತು ಪುಟ್ಟರಾಜು ಹಾಗೂ ಸಚಿವ ನಾರಾಯಣಗೌಡ ನಡುವೆ ವಾಗ್ಯುದ್ಧ ನಡೆಯಿತು…

error: