
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ತಾಲ್ಲೂಕಿನ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಮುಖಕ್ಕೆ ಮಾಸ್ಕ್ ಧರಿಸಿ, ವೆಯಕ್ತಿಕ ಸ್ವಚ್ಛತೆಗೆ ಒತ್ತು ನೀಡಿ ಎಂದು ಕಿವಿಮಾತು ಹೇಳಿದ್ದಕ್ಕೆ ಕೊರೋನಾ ವಾರಿಯರ್ ಆಗಿರುವ ಕೊಡಗಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ಕೆ.ವೈ.ಶೋಭಾ ಅವರ ಮೇಲೆ ಗ್ರಾಮದ ಮಂಜೇಗೌಡ, ರುದ್ರೇಶ, ಪ್ರಿಯಾಂಕಾ, ಗೀತ ಮತ್ತು ನಿಖಿಲ್ ಅವರಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ತಮ್ಮ ಮೇಲೆ ಹಲ್ಲೆ ನಡೆಸಿರುವ ಐವರ ವಿರುದ್ಧ ಕೃಷ್ಣರಾಜಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ಆಶಾ ಕಾರ್ಯಕರ್ತೆ ಶೋಭಾ ದೂರ ದಾಖಲಿಸಿದ್ದಾರೆ.
ರಾಜಾರೋಷವಾಗಿ ಗ್ರಾಮದಲ್ಲಿ ಕ್ವಾರಂಟೈನ್ ಮುಗಿಸಿ ಬಿಡುಗಡೆಗೊಂಡವರು ಓಡಾಡುತ್ತಿರುವುದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ..ಸಂತೇಬಾಚಹಳ್ಳಿ ಹೊರ ಠಾಣೆಯ ಪೋಲಿಸರು ಗ್ರಾಮಕ್ಕೆ ಭೇಟಿ..ಪರಿಸ್ಥಿತಿಯ ಅವಲೋಕನ.
ಗದ್ದಲದಲ್ಲಿ ತನ್ನ ಮಾಂಗಲ್ಯದ ಸರವನ್ನು ಆಶಾ ಕಾರ್ಯಕರ್ತೆ ಕಳೆದುಕೊಂಡಿದ್ದು ತನಗೆ ರಕ್ಷಣೆ ಕೊಡಿಸುವಂತೆ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ
ವಿಶೇಷವರದಿ:- ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ