July 11, 2024

Bhavana Tv

Its Your Channel

ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್

ಆನೆಗೊಳ ಗ್ರಾಮ ಪಂಚಾಯಿತಿಯ ಎರಡನೇ ಅವದಿಗೆ ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್ ಅವಿರೋಧವಾಗಿ ಆಯ್ಕೆಯಾದರು.

ಕೃಷ್ಣರಾಜಪೇಟೆ ; ತಾಲ್ಲೂಕಿನ ಗಡಿಭಾಗವಾದ ಆನೆಗೊಳ ಗ್ರಾಮ ಪಂಚಾಯತಿ ಎರಡನೇ ಅವದಿಗೆ ಶುಕ್ರವಾರ ಅಧ್ಯಕ್ಷ ಮತ್ತು ಉಪಾದ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಕರ್ನಾಟಕ ಸಹಕಾರ ಮಹಾ ಮಂಡಲಿಯ ನಿರ್ದೇಶಕರಾದ ಸಿ.ಎನ್ ಪುಟ್ಟಸ್ವಾಮಿಗೌಡ್ರು, ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅದ್ಯಕ್ಷರಾದ ಬಿ.ಎಂ ಕಿರಣ್, ಹೇಮಾವತಿ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕರಾದ ಬಿ.ಎಸ್ ಮಂಜುನಾಥ್, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಐನೋರಹಳ್ಳಿ ಮಲ್ಲೇಶ್, ಜೆ.ಡಿ.ಎಸ್ ಪಕ್ಷದ ಹೋಬಳಿಯ ಯೂಥ್ ಅಧ್ಯಕ್ಷರಾದ ಕೋಳಿ ವೆಂಕಟೇಶ್ ನೇತೃತ್ವದಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಂಜೇಶ್ ರವನ್ನು ಹೊರತು ಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ಆಯ್ಕೆಯಾಗಿದ್ದಾರೆಂದು ತಿಳಿಸಿದರು.
ಬಳಿಕ ಮಾತನಾಡಿದ ನೂತನ ಸದಸ್ಯರ ಮತ್ತು ಅಧ್ಯಕ್ಷರು ಪರಸ್ಪರ ಸಹಕಾರ ಮನೋಭಾವದಿಂದ ತಮ್ಮ ಅವಧಿಯಲ್ಲಿ ಅಭಿವೃದ್ಧಿ ವಿಚಾರಗಳಿಗೆ ರಾಜಕೀಯ ಬೆರೆಸದೆ ಪಕ್ಷ ಬೇಧ ಮರೆತು ಸರ್ವ ಸದಸ್ಯರ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಆಡಳಿತ ಮಂಡಳಿ ಎಂಬುವ ಹೆಗ್ಗಳಿಕೆಗೆ ಪಾತ್ರರಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮವಹಿಸಬೇಕು ಎಂದು ಸಲಹೆ ನೀಡಿದರು.

ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷರಾದ ಕಾಯಿ ಮಂಜೇಗೌಡ, ಕೆ.ಪಿ.ಎಸ್ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣೇಗೌಡ್ರು ಮುಖಂಡರಾದ ಚಿಕ್ಕತರಹಳ್ಳಿ ರಾಮಕೃಷ್ಣೇಗೌಡ್ರು, ಡಾಣಶೇಖರ್, ಶಿಲುಪಾಲು, ಗ್ರಾಮ ಪಂಚಾಯತಿ ಸದಸ್ಯರಾದ ಅನಸೂಯಾ, ರಂಜಿತ, ಧನಲಕ್ಷ್ಮಿ, ಯೋಗೇಶ್, ರಕ್ಷೀತ್, ಪ್ರಕಾಶ್, ನಾಗಮ್ಮ, ಗಂಗಾಧರ್, ಜಗನ್ನಾಥ್, ಭಾಗ್ಯಮ್ಮ, ಮಂಜಶೆಟ್ಟಿ, ಲಕ್ಷ್ಮಿ, ರಮೇಶ್, ಕುಮಾರಿ, ಸೇರಿದಂತೆ ಮತ್ತಿತರರು ಇದ್ದರು..

ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ

error: