
ಮoಡ್ಯ: ಕೃಷ್ಣರಾಜಪೇಟೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆಯುತ್ತಿದ್ದ ಸಂತೆ ವ್ಯಾಪಾರದ ವಹಿವಾಟು ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ೭೮ದಿನಗಳ ನಂತರ ಇಂದು ಅಧಿಕೃತವಾಗಿ ಮತ್ತೆ ಎಂದಿನoತೆ ಆರಂಭವಾಯಿತು.
ತಹಶೀಲ್ದಾರ್ ಎಂ. ಶಿವಮೂರ್ತಿ, ಎಪಿಎಂಸಿ ಕಾರ್ಯದರ್ಶಿ ಇಕ್ಬಾಲ್ ಪಾಶ, ವ್ಯವಸ್ಥಾಪಕ ಸತೀಶ್, ನಿರ್ದೇಶಕರಾದ ತರಕಾರಿ ನಾಗಣ್ಣ ಸಂತೆಯ ಆವರಣದಲ್ಲಿ ಸಂಚರಿಸಿ ವ್ಯಾಪಾರಿಗಳು ಮತ್ತು ಗ್ರಾಹಕರಿಗೆ ಸಾಮಾಜಿಕ ಅಂತರದ ನೀತಿಪಾಠವನ್ನು ಹೇಳಿದರು,
ವ್ಯಾಪಾರಿಗಳು ಮತ್ತು ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ವೆಯಕ್ತಿಕ ಸ್ವಚ್ಛತೆಗೆ ಒತ್ತುನೀಡಿ ಕೈಗಳನ್ನು ಸೋಪು ಇಲ್ಲವೇ ಸ್ಯಾನಿಟೈಸರ್ ನಿಂದ ತೊಳೆದುಕೊಂಡು ಕೊರೋನಾ ವೈರಾಣುವಿನ ವಿರುದ್ಧ ಹೋರಾಟ ಮಾಡಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಮನವಿ ಮಾಡಿದರು.
ವರದಿ. ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ .
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ