May 17, 2024

Bhavana Tv

Its Your Channel

ಪೋನ್ ಇನ್ ಕಾರ್ಯಕ್ರಮದ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷಾ ಭಯ ದೂರ ಮಾಡಿದ ಕೆ.ಆರ್.ಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳು

ಮಂಡ್ಯ:- ಜೂನ್ ೨೫ರಿಂದ ಜುಲೈ ೦೪ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಪೋನ್ ಇನ್ ಕಾರ್ಯಕ್ರಮ ನಡೆಸಿ ಪರೀಕ್ಷಾ ಆತಂಕ ದೂರಮಾಡಿದ ಕೆ.ಆರ್.ಪೇಟೆ ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು….

ಕೋವಿಡ್-೧೯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆತಂಕವಿದ್ದು. ಅಗತ್ಯ ಆರೋಗ್ಯ ಎಚ್ಚರಿಕಾ ಕ್ರಮಗಳನ್ನು ಕೈಗೊಂಡು ಸುರಕ್ಷತೆ ಹಾಗೂ ಮಕ್ಕಳ ಆರೋಗ್ಯಕ್ಕೆ ಒತ್ತು ನೀಡಿ ಪರೀಕ್ಷೆಯನ್ನು ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇಂದು ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪೋಷಕರು ಕರೆ ಮಾಡಿ ಮಾಹಿತಿಯನ್ನು ಪಡೆದುಕೊಂಡರು. ಯಾವುದೇ ಕಾರಣಕ್ಕೂ ಪರೀಕ್ಷೆ ನಿಲ್ಲುವುದಿಲ್ಲ. ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ನಿರ್ಣಾಯಕ ಘಟ್ಟವಾಗಿರುವುದರಿಂದ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗಳು ಸಿದ್ಧರಾಗಬೇಕು ಎಂದು ಬಿಇಓ ಬಸವರಾಜು ಮನವಿ ಮಾಡಿದರು. ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿ ಆತಂಕ ದೂರ ಮಾಡಿದರು.

ಪೋನ್ ಇನ್ ಕಾರ್ಯಕ್ರಮದಲ್ಲಿ ಕ್ಷೇತ್ರಸಮನ್ವಯಾಧಿಕಾರಿ ಲಿಂಗರಾಜು, ಶಿಕ್ಷಣ ಸಂಯೋಜಕರಾದ ವೇಣುಗೋಪಾಲ್, ನೀಲಾಮಣಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್.ಚಂದ್ರಶೇಖರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಕೃಷ್ಣಯ್ಯ, ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ಪ್ರಸನ್ನಕುಮಾರ್, ಜ್ಞಾನೇಶ್ ಮತ್ತಿತರರು ಭಾಗವಹಿಸಿದ್ದರು..

ವರದಿ:-ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ .

error: