
ಮಂಡ್ಯ:- ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿ ಸೀಲ್ ಡೌನ್ ಆಗಿದ್ದ ರಾಜಘಟ್ಟ ಮತ್ತು ಜಾಗಿನಕೆರೆ ಕಂಟೋನ್ಮೆoಟ್ ಜೋನ್ ನಿಂದ ಮುಕ್ತವಾಗಿ ಸೀಲ್ ಡೌನ್ ತೆರವುಗೊಳಿಸಲಾಗಿದೆ. ಸಧ್ಯದಲ್ಲಿಯೇ ಮರುವನಹಳ್ಳಿ ಗ್ರಾಮವನ್ನೂ ಕೂಡ ಸೀಲ್ ಡೌನ್ ನಿಂದ ಮುಕ್ತಗೊಳಿಸಲಾಗುವುದು ಎಂದು ರಾಜ್ಯದ ತೋಟಗಾರಿಕೆ, ರೇಷ್ಮೆ, ಪೌರಾಡಳಿತ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಹೇಳಿದರು.
ಪ್ರವಾಸಿ ಮಂದಿರದಲ್ಲಿ ತಹಶೀಲ್ದಾರ್ ಶಿವಮೂರ್ತಿ ಅವರೊಂದಿಗೆ ಪತ್ರಿಕಾಗೋಷ್ಠಿ ನಡಿಸಿ ಮಾತನಾಡಿಕೃಷ್ಣರಾಜಪೇಟೆ ತಾಲೂಕಿನ ೧೬ ವಿವಿಧ ಕೇಂದ್ರಗಳಲ್ಲಿ ಸಾಂಸ್ಥಿಕ ಹೋಂ ಕ್ವಾರಂಟೈನ್ ಆಗಿದ್ದ ೧೩೦೦ಕ್ಕೂ ಹೆಚ್ಚು ಜನರು ಗುಣಮುಖರಾಗಿ ತಮ್ಮ ಮನೆಗಳಿಗೆ ತೆರಳಿದ್ದಾರೆ. ಕೊರೋನಾ ಸೋಂಕು ಪತ್ತೆಯಾಗಿ ಮಂಡ್ಯದ ಮಿಮ್ಸ್ ನ ಐಸುಲೇಷನ್ ವಾರ್ಡಿಗೆ ದಾಖಲಾಗಿದ್ದ ರೋಗಿಗಳ ಪೈಕಿ ೭೬ಜನರನ್ನು ಹೊರತುಪಡಿಸಿ ಎಲ್ಲರೂ ಗುಣಮುಖರಾಗಿ ಬಿಡುಗಡೆಯಾಗಿದ್ದು ಉಳಿದವರೂ ಚೇತರಿಸಿಕೊಳ್ಳುತ್ತಿದ್ದು ಸಧ್ಯದಲ್ಲಿಯೇ ಅವರೂ ಬಿಡುಗಡೆಗೊಳ್ಳುತ್ತಿದ್ದಾರೆ…ಕೊರೋನಾ ಸೋಂಕಿನ ಬಗ್ಗೆ ಯಾರೂ ಭಯಪಡಬೇಕಾಗಿಲ್ಲ. ತಾಲ್ಲೂಕಿನಲ್ಲಿ ಕೊರೋನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ. ಆದ್ದರಿಂದ ಜನರು ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿ ಕೈಗಳನ್ನು ಸ್ಯಾನಿಟೈಸರ್ ನಿಂದ ತೊಳೆದುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ, ಜಿಲ್ಲಾ ಪಂಚಾಯತಿ ಮಾಜಿಸದಸ್ಯ ಅಘಲಯ ಮಂಜುನಾಥ್, ಕೆ.ಆರ್.ಹೇಮಂತಕುಮಾರ್, ಕೆ.ವಿನೋದ್, ಮಾಮಪ್ರವೀಣ್, ಶ್ರೀಧರಸಿರಿವಂತ್, ಅಗ್ರಹಾರಬಾಚಹಳ್ಳಿ ಜಗಧೀಶ್, ಪುರಸಭೆ ಸದಸ್ಯರಾದ ಹೆಚ್.ಆರ್.ಲೋಕೇಶ್, ಶಾಮಿಯಾನತಿಮ್ಮೇಗೌಡ, ದಿನೇಶ್, ಕೋಳಿ ನಾಗರಾಜು ಮುಖ್ಯಾಧಿಕಾರಿ ಸತೀಶ್ ಕುಮಾರ್, ಸಚಿವರ ಆಪ್ತಸಹಾಯಕರಾದ ದಯಾನಂದ, ಕಿಕ್ಕೇರಿ ಕುಮಾರ್, ರವಿ ಮತ್ತಿತರರು ಉಪಸ್ಥಿತರಿದ್ದರು…
ವರದಿ. ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ