April 2, 2025

Bhavana Tv

Its Your Channel

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಎದುರಿಸಿದ ೬೫೦ ವಿದ್ಯಾರ್ಥಿಗಳಿಗೆ ಭಾರತೀಯ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಸಸಿ, ಹಣ್ಣು ಹಂಪಲ ವಿತರಣೆ

ಮಂಡ್ಯ:- ಕೃಷ್ಣರಾಜಪೇಟೆ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ದ್ವಿತೀಯ ಪಿಯುಸಿ ಪರೀಕ್ಷಾ ಸೆಂಟರ್‌ನಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಎದುರಿಸಿದ ೬೫೦ ವಿದ್ಯಾರ್ಥಿಗಳಿಗೆ ಭಾರತೀಯ ರೆಡ್ ಕ್ರಾಸ್ ಘಟಕ ಮಂಡ್ಯ ಜಿಲ್ಲೆಯ ಸಹಯೋಗದಲ್ಲಿ ಹೂವು ಹಣ್ಣಿನ ಸಸಿಗಳು ಹಾಗೂ ಫ್ರೂಟಿ ಜ್ಯೂಸ್ ಪ್ಯಾಕೇಟ್ ಗಳನ್ನು ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ವಿತರಿಸಿದರು.

ಇಂದು ತಾಲ್ಲೂಕಿನ ಕೆ.ಪಿ.ಎಸ್ ಸ್ಕೂಲ್, ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಗ್ರಾಮಭಾರತಿ ಶಿಕ್ಷಣ ಸಂಸ್ಥೆ ಸೇರಿದಂತೆ ೩ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ಆಂಗ್ಲಭಾಷಾ ಪರೀಕ್ಷೆಯನ್ನು ಎದುರಿಸಿದ ತಾಲ್ಲೂಕಿನ ಎಲ್ಲಾ ೨ ಸಾವಿರ ವಿದ್ಯಾರ್ಥಿಗಳಿಗೂ ಸಸಿಗಳನ್ನು ವಿತರಿಸಿದ ಕ್ಷೇತ್ರಸಮನ್ವಯಾಧಿಕಾರಿ ಲಿಂಗರಾಜು, ಕೆಪಿಎಸ್ ಸ್ಕೂಲ್ ಪ್ರಾಂಶುಪಾಲ ಡಿ.ಬಿ.ಸತ್ಯ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ಉದ್ಯಮಿ ಡಾ.ಕೆ.ಎಸ್.ರಾಜೇಶ್ ಪರಿಸರ ಜಾಗೃತಿ ಮೂಡಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು, ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಡಿ.ಲಕ್ಷ್ಮಣ್, ಪಟ್ಟಣ ಪೋಲಿಸ್ ಠಾಣೆಯ ಪಿ.ಎಸ್.ಐ ಬ್ಯಾಟರಾಯಗೌಡ ಮತ್ತಿತರರು ಉಪಸ್ಥಿತರಿದ್ದರು..


ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ .

error: