April 4, 2025

Bhavana Tv

Its Your Channel

೨೫ಲಕ್ಷರೂ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಡಾ.ನಾರಾಯಣಗೌಡ

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ವರ್ಗಗಳ ಜನರು ವಾಸವಾಗಿರುವ ಕಾಲೋನಿಯ ೨೫ಲಕ್ಷರೂ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ರಾಜ್ಯದ ತೋಟಗಾರಿಕೆ, ರೇಷ್ಮೆ, ಪೌರಾಡಳಿತ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಭೂಮಿ ಪೂಜೆ ಮಾಡಿದರು . ದಲಿತ ಬಂಧುಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿ ಮಾಡಿಸಿ ಸಮಾಜದ ಮುಖ್ಯವಾಹಿನಿಗೆ ಬಂದು ಸಾಧನೆ ಮಾಡುವಂತೆ ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು. ವೆಯಕ್ತಿಕ ಸ್ವಚ್ಛತೆಗೆ ಒತ್ತು ನೀಡಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೊರೋನಾ ಸೋಂಕು ಹರಡದಂತೆ ಎಚ್ಚರ ವಹಿಸಬೇಕು ಎಂದು ಸಚಿವ ನಾರಾಯಣಗೌಡ ಮನವಿ ಮಾಡಿದರು.

ಹೊಸಹೊಳಲು ಮೇಲ್ಗಾಲುವೆ ಕಾಮಗಾರಿ ಸದ್ಯದಲ್ಲಿಯೇ ಪೂರ್ಣ:–
ಬೂಕನಕೆರೆ ಹೋಬಳಿಯ ೧೦ಸಾವಿರ ಎಕರೆಗೂ ಹೆಚ್ಚಿನ ಭೂಪ್ರದೇಶಕ್ಕೆ ನೀರುಣಿಸುವ ಹೊಸಹೊಳಲು ಮೇಲ್ಗಾಲುವೆ ಕಾಮಗಾರಿಯು ನೆನಗುದಿಗೆ ಬಿದ್ದಿದೆ. ಸಧ್ಯದಲ್ಲಿಯೇ ಕಾಮಗಾರಿಯನ್ನು ಸಂಪೂರ್ಣಗೊಳಿಸಿ ರೈತರ ಜಮೀನಿಗೆ ನೀರು ಹರಿಯುವಂತೆ ಮಾಡಲಾಗುವುದು. ಕಾಲುವೆಯ ನಿರ್ಮಾಣಕ್ಕಾಗಿ ಭೂಮಿಯನ್ನು ಕಳೆದುಕೊಂಡಿರುವ ರೈತರಿಗೆ ಪರಿಹಾರ ಕೊಡಿಸಿ ಕಾಮಗಾರಿಯನ್ನು ಸಂಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವರು ರೈತರಿಗೆ ಭರವಸೆ ನೀಡಿದರು.

ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಜಿ.ಪಂ ಮಾಜಿಉಪಾಧ್ಯಕ್ಷ ಎಸ್.ಅಂಬರೀಶ್, ಜಿ.ಪಂ ಮಾಜಿಸದಸ್ಯ ಅಘಲಯ ಮಂಜುನಾಥ್, ಹೇಮಾವತಿ ಯೋಜನೆಯ ಬೂಕನಕೆರೆ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ದೇವೇಗೌಡ, ಸಹಾಯಕ ಎಂಜಿನಿಯರ್ ರವಿ, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಗ್ರಾಮಾಂತರ ಠಾಣೆ ಸಬ್ ಇನ್ಸ್ ಪೆಕ್ಟರ್ ಡಿ.ಲಕ್ಷ್ಮಣ, ಸಚಿವರ ಆಪ್ತಸಹಾಯಕರಾದ ದಯಾನಂದ, ಕಿಕ್ಕೇರಿ ಕುಮಾರ್, ಮುಖಂಡರಾದ ಬಿ.ಜವರಾಯಿಗೌಡ, ಬಲ್ಲೇನಹಳ್ಳಿ ರಮೇಶ್, ಮಾಮಪ್ರವೀಣ್, ಪ್ರಕಾಶ್, ರಾಜೇಗೌಡ, ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು….

ವರದಿ:- ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ
.

error: