April 4, 2025

Bhavana Tv

Its Your Channel

ಜೂನ್ 25ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ…ಸಕಲ ಸಿದ್ಧತೆ ಕೈಗೊಂಡಿರುವ ಶಿಕ್ಷಣ ಇಲಾಖೆ.

09 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವ 2822 ವಿದ್ಯಾರ್ಥಿಗಳು..ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು ಅವರಿಂದ ಮಾಹಿತಿ …

ಕೃಷ್ಣರಾಜಪೇಟೆ : ತಾಲ್ಲೂಕಿನ 9ಕೇಂದ್ರಗಳಲ್ಲಿ 2822 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಎದುರಿಸುತ್ತಿದ್ದು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ತಿಳಿಸಿದರು…

ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಕೇವಲ 18 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದ್ದು ಸಿಸಿ ಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಕೆ.ಆರ್.ಪೇಟೆ ಪಟ್ಟಣದ ಕೆ.ಪಿ.ಎಸ್ ಶಾಲೆ, ಗ್ರಾಮಭಾರತಿ ಶಿಕ್ಷಣ ಸಂಸ್ಥೆ, ಸರ್ಕಾರಿ ಪದವಿಪೂರ್ವ ಕಾಲೇಜು, ಕಿಕ್ಕೇರಿಯ ಕೆಪಿಎಸ್ ಸ್ಕೂಲ್, ಸರ್ಕಾರಿ ಪದವಿಪೂರ್ವ ಕಾಲೇಜು, ಅಕ್ಕಿಹೆಬ್ಬಾಳು ಸರ್ಕಾರಿ ಪದವಿಪೂರ್ವ ಕಾಲೇಜು, ಸಂತೇಬಾಚಹಳ್ಳಿ, ಶೀಳನೆರೆ ಹಾಗೂ ಬೂಕನಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸಲು ಅನುಕೂಲವಾಗುವಂತೆ 61 ಕೇಂದ್ರಗಳಲ್ಲಿ ಬಸ್ಸುಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಲು ವ್ಯವಸ್ಥೆ ಮಾಡಲಾಗಿದೆ..ಮುಕ್ತ ಹಾಗೂ ಪಾರದರ್ಶಕವಾಗಿ ಯಾವುದೇ ಲೋಪಗಳಾಗದಂತೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ಸಜ್ಜಾಗಿದೆ. ಪ್ರತೀ ವಿದ್ಯಾರ್ಥಿಗಳಿಗೂ ಮೂರು ಮಾಸ್ಕುಗಳನ್ನು ನೀಡಲಾಗುವುದಲ್ಲದೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿಸಿ ಸ್ಯಾನಿಟೈಸರ್ ನಲ್ಲಿ ಕೈತೊಳೆಸಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುವುದು. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಎಚ್ಚರ ವಹಿಸಲಾಗಿದೆ ಎಂದು ಬಿಇಓ ಬಸವರಾಜು ವಿವರಿಸಿದರು…

ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೃಷ್ಣರಾಜಪೇಟೆ ತಾಲ್ಲೂಕು ಪ್ರಥಮ ಸ್ಥಾನ ಪಡೆಯುವ ನಿರೀಕ್ಷೆ …

ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲ್ಲೂಕು 4ನೇ ಸ್ಥಾನ ಪಡೆದಿತ್ತು. ಈ ಭಾರಿಯ ಪರೀಕ್ಷೆಯಲ್ಲಿ ನಮ್ಮ ತಾಲ್ಲೂಕು ಹಾಗೂ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಲಿದ್ದಾರೆ ಎಂಬ ವಿಶ್ವಾಸವಿದೆ. ತಾಲ್ಲೂಕಿನಲ್ಲಿ ಶೈಕ್ಷಣಿಕ ವಾತಾವರಣ ಅತ್ಯುತ್ತಮವಾಗಿದೆ. ನಮ್ಮ ವಿದ್ಯಾರ್ಥಿಗಳು ಒಳ್ಳೆಯ ಸಾಧನೆ ಮಾಡಲಿದ್ದಾರೆ ಎಂದು ಬಿಇಓ ಬಸವರಾಜು ವಿಶ್ವಾಸ ವ್ಯಕ್ತಪಡಿಸಿದರು…

ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಯ್ಯ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್.ಚಂದ್ರಶೇಖರ್, ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿ ಎಂ.ಎನ್.ರಮೇಶ್, ಸಂಪನ್ಮೂಲ ವ್ಯಕ್ತಿಗಳಾದ ವೇಣುಗೋಪಾಲ, ನೀಲಾಮಣಿ, ಸೋಮಶೇಖರ್, ಆರ್.ಕೆ.ಬೋರೇಗೌಡ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು…

ವರದಿ. ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ ….

error: