May 19, 2024

Bhavana Tv

Its Your Channel

ಕೆ.ಆರ್.ಪೇಟೆ ಕ್ರೈಸ್ಟ್ದ ಕಿಂಗ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ೧೦೦% ಫಲಿತಾಂಶ

ಮಂಡ್ಯ: ಕೃಷ್ಣರಾಜಪೇಟೆ ಪಟ್ಟಣದ ಕ್ರೈಸ್ಟ್ ದ ಕಿಂಗ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆಯುವ ಮೂಲಕ ಸರ್ವಶ್ರೇಷ್ಠ ಸಾಧನೆಯನ್ನು ಮಾಡಿ ತಾಲ್ಲೂಕಿನಲ್ಲಿ ಇತಿಹಾಸ ನಿರ್ಮಾಣ ಮಾಡಿದೆ .

ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ.ಆಂಥೋನಿಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಸರ್ವಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಕೆ.ಸ್ನೇಹ, ರಾಹುಲ್ ರಾಯ್, ಸ್ಪೂರ್ತಿ ಮತ್ತು ಹೆಚ್.ಎಂ.ಪವನ್ ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರೆ ವಾಣಿಜ್ಯ ವಿಭಾಗದಲ್ಲಿ ಪವಿತ್ರ, ಆರ್.ಸಹನಾ ಮತ್ತು ಜಿ.ಸಿಂಚನ ಸರ್ವಶ್ರೇಷ್ಠ ಸಾಧನೆ ಮಾಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ೪೫ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿ ಎಲ್ಲರೂ ಉತ್ತೀರ್ಣರಾಗಿ ಶೇ.೧೦೦ಕ್ಕೆ ೧೦೦ರಷ್ಟು ಫಲಿತಾಂಶ ತಂದುಕೊಟ್ಟಿದ್ದಾರೆ ೧೪ ವಿದ್ಯಾರ್ಥಿಗಳು ಉನ್ನತಶ್ರೇಣಿ ಹಾಗೂ ೩೧ ವಿದ್ಯಾರ್ಥಿಗಳು ಪ್ರಥಮದರ್ಜೆ ಯಲ್ಲಿ ಉತ್ತೀರ್ಣರಾಗಿ ದಾಖಲೆ ನಿರ್ಮಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡ೯೯ ರಷ್ಟು ಫಲಿತಾಂಶ ಬಂದಿದ್ದು ೫ ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ ೧೫ ವಿದ್ಯಾರ್ಥಿಗಳು ಪ್ರಥಮದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲುಹೊದಿಸಿ ಸನ್ಮಾನಿಸಿ ಗೌರವಿಸಿದ ಡಾ.ಆಂಥೋನಿಸ್ವಾಮಿ ವಿದ್ಯಾರ್ಥಿಗಳಿಗೆ ಉತ್ತಮವಾದ ಭವಿಷ್ಯವಿದೆ…ಇವರೆಲ್ಲರೂ ಮುಂದಿನ ದಿನಗಳಲ್ಲಿ ಸಾಧಕರಾಗಿ ಹೊರಹೊಮ್ಮಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು..

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಶಿವಕುಮಾರ್, ಉಪನ್ಯಾಸಕ ವೆಂಕಟೇಶ್, ತಾಲ್ಲೂಕು ಕಸಾಪ ಮಾಜಿಅಧ್ಯಕ್ಷರಾದ ಡಾ.ಕೆ.ಆರ್.ನೀಲಕಂಠ, ಹರಿಚರಣತಿಲಕ್, ಶ್ರೀನಿವಾಸ್ ಸಜ್ಜನ್ ಹಾಗೂ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.

ವರದಿ. ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ. ಮಂಡ್ಯ.

error: