
ಕೆ.ಆರ್.ಪೇಟೆ ಪಟ್ಟಣದ ನಾಗಮಂಗಲ ರಸ್ತೆಯಲ್ಲಿರುವ ದೇವೀರಮ್ಮಣ್ಣಿ ಕೆರೆಯ ಬಸವನಕಟ್ಟೆಯ ಬಳಿ ಅಪರಿಚಿತ ಸುಮಾರು 50 ವರ್ಷ ವಯಸ್ಸಿನ ಗಂಡಸಿನ ಮೃತ ದೇಹವು ಪತ್ತೆಯಾಗಿದೆ.
ಕೆರೆಯ ನೀರಿನಲ್ಲಿ ತೇಲುತ್ತಿದ್ದ ಕಪ್ಪು ಪ್ಯಾಂಟು, ಬಿಳಿ ಬಣ್ಣದ ಶರ್ಟ್ ಧರಿಸಿರುವ ಕೊಳೆತ ಸ್ಥಿತಿಯಲ್ಲಿದ್ದ ಗಂಡಸಿನ ಶವವನ್ನು ಕಂಡ ಸಾರ್ವಜನಿಕರು ಕೆ.ಆರ್.ಪೇಟೆ ಪಟ್ಟಣ ಪೋಲಿಸರಿಗೆ ಸುದ್ದಿಯನ್ನು ಮುಟ್ಟಿಸಿದ ತಕ್ಷಣ ಅಗ್ನಿಶಾಮಕ ಸಿಬ್ಬಂಧಿಗಳ ಸಹಾಯದಿಂದ ಮೃತ ದೇಹವನ್ನು ನೀರಿನಿಂದ ಹೊರತೆಗೆದು ಶವದ ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು.
ಕೆ.ಆರ್.ಪೇಟೆ ಪಟ್ಟಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಮೊಕದ್ದಮೆಯನ್ನು ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಕೆ.ಆರ್.ಪೇಟೆ ಪಟ್ಟಣ ಪೋಲಿಸರನ್ನು ಸಂಪರ್ಕಿಸಿ ದೂರವಾಣಿ ಸಂಖ್ಯೆ 08230-262248 ಅಥವಾ ಮೊ.9480804859 ಗೆ ಮಾಹಿತಿ ನೀಡಬೇಕೆಂದು ಬ್ಯಾಟರಾಯಗೌಡ ಮನವಿ ಮಾಡಿದ್ದಾರೆ…
ಮಾಹಿತಿಗಾಗಿ. ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ. ಮಂಡ್ಯ.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ