May 4, 2024

Bhavana Tv

Its Your Channel

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಬೂಕನಕೆರೆ ಹೋಬಳಿಯ ಉದ್ಭವ ಬೋಳಾರೆ ರಂಗನಾಥಸ್ವಾಮಿ ಕ್ಷೇತ್ರದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮಗಳು ಬಂದ್-ತಾಲ್ಲೂಕು ಆಡಳಿತದ ಆದೇಶ.

ಕೊರೋನಾ ಮಹಾಮಾರಿಯ ಅಟ್ಟಹಾಸದ ಹಿನ್ನೆಲೆಯಲ್ಲಿ ಬೆಟ್ಟದಹೊಸೂರು ಗ್ರಾಮದ ಶ್ರೀ ಉದ್ಭವ ಬೋಳಾರೆ ರಂಗನಾಥ ಕ್ಷೇತ್ರದಲ್ಲಿ ರಥೋತ್ಸವ, ಜಾತ್ರೆ, ವಿಶೇಷ ಪೂಜಾ ಕಾರ್ಯಕ್ರಮಗಳು, ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮಗಳನ್ನು ನಿಷೇಧಿಸಿ ಆದೇಶ ಹೊರಡಿಸಿರುವ ತಾಲ್ಲೂಕು ಆಡಳಿತ ಸರಳವಾಗಿ ದೇವರ ಪೂಜೆ ಮಾಡಿ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ಮಾಸ್ಕ್ ಧರಿಸಿಕೊಂಡು ಬರುವ ಭಕ್ತರಿಗೆ ಮಾತ್ರ ಥರ್ಮಲ್ ಸ್ಕ್ಯಾನಿಂಗ್ ಮಾಡಿಸಿ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಬೇಕು ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ದೇವಾಲಯದ ಧರ್ಮದರ್ಶಿ ಸಮಿತಿಯ ಅಧ್ಯಕ್ಷರು, ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಅರ್ಚಕರಿಗೆ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಉದ್ಭವ ಬೋಳಾರೆ ರಂಗನಾಥಸ್ವಾಮಿ ದೇವಾಲಯ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಬೂಕನಕೆರೆ ಬಿ.ಟಿ.ವೆಂಕಟೇಶ್ ಮಾತನಾಡಿ ತಾಲ್ಲೂಕು ಆಡಳಿತದ ನಿರ್ದೇಶನದಂತೆ ಕೊರೋನಾ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಅತ್ಯಂತ ಸರಳವಾಗಿ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಿ ಭಕ್ತರಿಗೆ ಕೇವಲ ದರ್ಶನಕ್ಕೆ ಅವಕಾಶ ಮಾಡಿಕೊಡುತ್ತೇವೆ. ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ರಥೋತ್ಸವ ಜಾತ್ರೆಯನ್ನು ನಡೆಸದೇ ಬಿಗಿಯಾಗಿ ಕೊರೋನಾ ನಿಯಮಗಳನ್ನು ಪಾಲಿಸುತ್ತೇವೆ ಎಂದು ತಿಳಿಸಿದರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಬದಲ್ಲಿ ದೇವಾಲಯ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬಿ.ಟಿ.ವೆಂಕಟೇಶ್, ವಿ.ಪುಟ್ಟಸ್ವಾಮಿ, ಉಪಾಧ್ಯಕ್ಷ ವೆಂಕಟರಮಣೇಗೌಡ, ಕಾರ್ಯದರ್ಶಿ ಎಂ.ಆರ್.ಸುದರ್ಶನ್, ದಿನೇಶ್, ದೇವಾಲಯದ ಪ್ರಧಾನ ಅರ್ಚಕರಾದ ಹೆಚ್.ಪಿ.ಸುಂದರ್, ಮನೋಹರ್ ಜಿ, ಬೂಕನಕೆರೆ ಹೋಬಳಿಯ ರಾಜಶ್ವನಿರೀಕ್ಷಕ ರಾಜಮೂರ್ತಿ ಮತ್ತಿತರರು ಉಪಸ್ಥಿತರಿದ್ದರು
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: