May 19, 2024

Bhavana Tv

Its Your Channel

ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಬಕ್ರೀದ್ ಹಿನ್ನೆಲೆ ಪೋಲಿಸ್ ಠಾಣೆಯ ಆವರಣದಲ್ಲಿ ಶಾಂತಿ ಸಮಿತಿ ಸಭೆಯು ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಂಡ್ಯ: ಕೊರೋನಾ ಸಂಕಷ್ಠದ ಹಿನ್ನೆಲೆಯಲ್ಲಿ ಅಗತ್ಯವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಬಕ್ರೀದ್ ಹಬ್ಬವನ್ನು ಆಚರಿಸಬೇಕು. ಯಾವುದೇ ಕಾರಣಕ್ಕೂ ಪಟ್ಟಣದಲ್ಲಿ ಮೆರವಣಿಗೆ ನಡೆಸಲು ಹಾಗೂ ಈದ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ ಸರ್ಕಲ್ ಇನ್ಸ್ ಪೆಕ್ಟರ್ ಸುಧಾಕರ್ ಮಸೀದಿಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಮಾಸ್ಕ್ ಧರಿಸಿಕೊಂಡು ಕೇವಲ ೫೦ಜನರಿಗೆ ಪ್ರಾರ್ಥನೆ ಮಾಡಲು ವಕ್ಫ್ ಸಮಿತಿ ಹಾಗೂ ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದರು…
ಮಸೀದಿಯಲ್ಲಿ ನಮಾಜ್ ಮಾಡುವಾಗ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ನಮಾಜ್ ನಂತರ ಬಕ್ರೀದ್ ಹಬ್ಬದ ಶುಭಾಶಯಗಳನ್ನು ಪರಸ್ಪರ ಆಲಂಗಿಸಿಕೊAಡು ವಿನಿಮಯ ಮಾಡುವಂತಿಲ್ಲ. ಹಸ್ತಲಾಘವ ಮಾಡುವುದನ್ನು ಕೂಡ ನಿಷೇಧಿಸಿದೆ ಎಂದು ಸ್ಪಷ್ಠಪಡಿಸಿದ ಸುಧಾಕರ್ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ಹಬ್ಬ ಆಚರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ಸಭೆಯ ನೇತೃತ್ವ ವಹಿಸಿದ್ದ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಮಾತನಾಡಿ ಕೋಮುಸೌಹಾರ್ಧತೆಗೆ ಕೃಷ್ಣರಾಜಪೇಟೆ ತಾಲ್ಲೂಕು ರಾಜ್ಯದಲ್ಲಿಯೇ ಮಾದರಿಯಾಗಿದೆ. ಆದ್ದರಿಂದ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬವನ್ನು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು. ವದಂತಿಗಳಿಗೆ ಕಿವಿಗೊಡಬಾರದು, ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡಬೇಕು. ಅಪರಿಚಿತ ವ್ಯಕ್ತಿಗಳು ಹಾಗೂ ಕಿಡಿಗೇಡಿಗಳು ಗಮನಕ್ಕೆ ಬಂದರೆ ಪೋಲಿಸರ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.. ಶಾಂತಿ ಸಮಿತಿ ಸಭೆಯಲ್ಲಿ ಕೆ.ಆರ್.ಪೇಟೆ ಪಟ್ಟಣದ ಮುಸ್ಲಿಂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ. ಮಂಡ್ಯ.

error: