May 5, 2024

Bhavana Tv

Its Your Channel

ಕೊರೋನಾ ಮಹಾಮಾರಿಗೆ ಮಂಡ್ಯದ ಜನಪ್ರಿಯ ವೈದ್ಯರಾದ ಡಾ.ಪ್ರಕಾಶ್ ನಿಧನ.

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ವಾತ್ಸಲ್ಯ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಜನಪ್ರಿಯ ವೈದ್ಯರಾದ ಡಾ.ಪ್ರಕಾಶ್(೬೨) ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ನಿಧನ.ಕೊರೋನಾ ಮಹಾಮಾರಿಗೆ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಮೊದಲ ಬಲಿ. ನಿನ್ನೆಯಷ್ಟೇ ಕೃಷ್ಣರಾಜಪೇಟೆ ಪಟ್ಟಣದ ಶ್ರವಣಬೆಳಗೊಳ ರಸ್ತೆಯ ದುರ್ಗಾಭವನ್ ಸರ್ಕಲ್ ನಲ್ಲಿರುವ ವೈದ್ಯರ ಕ್ಲಿನಿಕ್, ಮೆಡಿಕಲ್ ಸ್ಟೋರ್ ಅನ್ನು ಸೀಲ್ ಡೌನ್ ಮಾಡಲಾಗಿತ್ತು. ತಹಶೀಲ್ದಾರ್ ಎಂ.ಶಿವಮೂರ್ತಿ, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಕ್ಲಿನಿಕ್ ಬಳಿ ತೆರಳಿ ವೈದ್ಯರ ಬಳಿ ಚಿಕಿತ್ಸೆ ಪಡೆದವರು ಗಂಟಲು ದ್ರವ ಮಾದರಿಯ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಲು ಮನವಿ ಮಾಡಿದ್ದರು. ಜನಸಾಮಾನ್ಯರ ಆರೋಗ್ಯವನ್ನು ಕಾಪಾಡುತ್ತಿದ್ದ ವೈದ್ಯರೇ ಕೊರೋನಾ ಮಹಾಮಾರಿಯ ಅಟ್ಟಹಾಸಕ್ಕೆ ಬಲಿಯಾಗಿರುವುದು ಪಟ್ಟಣದ ಜನತೆಯಲ್ಲಿ ಆತಂಕ ಮೂಡಿಸಿದೆ.

ಪಟ್ಟಣದ ಜನತೆ ಹಾಗೂ ವಿವಿಧ ಪ್ರಗತಿಪರ ಸಂಘಸoಸ್ಥೆಗಳು ಹಾಗೂ ಕೃಷ್ಣರಾಜಪೇಟೆ ತಾಲ್ಲೂಕಿನ ವೈದ್ಯರು ಡಾ.ಪ್ರಕಾಶ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ, ಮಾಜಿಶಾಸಕ ಡಾ.ಕೆ.ಬಿ.ಚಂದ್ರಶೇಖರ್, ಪುರಸಭೆಯ ಸದಸ್ಯ ಕೆ.ಎಸ್.ಸಂತೋಷ್ ಕುಮಾರ್, ಕೆ.ಆರ್.ರವೀಂದ್ರಬಾಬೂ, ಡಿ.ಪ್ರೇಮಕುಮಾರ್, ಎಪಿಎಂಸಿ ಮಾಜಿಅಧ್ಯಕ್ಷ ಕೆ.ಎನ್.ಕೃಷ್ಣ, ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್, ಅವರು ಡಾ.ಪ್ರಕಾಶ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ವರದಿ :- ಡಾ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ. ಮಂಡ್ಯ.

error: