December 22, 2024

Bhavana Tv

Its Your Channel

ಕೃಷ್ಣರಾಜಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ೯೦ಲಕ್ಷ ರೂಪಾಯಿಗಳ ವೆಚ್ಚದಲ್ಲಿ ೪ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಸಚಿವರಾದ ಡಾ.ನಾರಾಯಣಗೌಡ ಅವರಿಂದ ಭೂಮಿಪೂಜೆ …

ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಸರಬರಾಜು ಸೇರಿದಂತೆ ಗ್ರಾಮಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ತಿಳಿಸಿದ ಸಚಿವರು..
ಶಿಕ್ಷಣವು ಯಾರೂ ಕದಿಯಲಾಗದ ಆಸ್ತಿಯಾಗಿದೆ. ಮಕ್ಕಳು ಶ್ರದ್ಧಾಭಕ್ತಿಯಿಂದ ವ್ಯಾಸಂಗ ಮಾಡಿ ಜೀವನದಲ್ಲಿ ಯಶಸ್ಸು ಗಳಿಸಿ ಸಾಧನೆ ಮಾಡಬೇಕು. ಜಾಗತಿಕ ಜಗತ್ತಿನ ಸ್ಪರ್ಧಾ ಪ್ರಪಂಚದಲ್ಲಿ ಜಾಣ್ಮೆ ಹಾಗೂ ಕೌಶಲ್ಯದಿಂದ ಸವಾಲುಗಳನ್ನು ಎದುರಿಸಿ ಗುರಿಮುಟ್ಟಬೇಕು ಎಂದು ಮನವಿ ಮಾಡಿದ ಸಚಿವ ಡಾ.ನಾರಾಯಣಗೌಡ…

ಭೂಮಿಪೂಜೆ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಷಫೀಅಹಮದ್, ಹರಿಹರಪುರ ಗ್ರಾಮಪಂಚಾಯಿತಿ ಮಾಜಿಅಧ್ಯಕ್ಷರಾದ ಹರೀಶ್, ಮೋಹನಕುಮಾರ್, ಜಿ.ಪಂ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್, ಮುಖಂಡರಾದ ಹ.ತಿ.ಶ್ರೀನಿವಾಸ್, ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಎಲ್.ದೇವರಾಜು, ಪ್ರೌಢಶಾಲಾ ಮುಖ್ಯಶಿಕ್ಷಕ ಕೃಷ್ಣೇಗೌಡ, ಲೋಕೋಪಯೋಗಿ ಇಲಾಖೆಯ ಎಇಇ ಮಹೇಶ್, ಪ್ರಥಮದರ್ಜೆ ಗುತ್ತಿಗೆದಾರ ನಾಗಮಂಗಲ ಸುರೇಶ್ ಮತ್ತು ಗ್ರಾಮಸ್ಥರು ಭೂಮಿಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: