ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕು ಕಛೇರಿಯ ಡಿ ಗ್ರೂಪ್ ನೌಕರನಿಗೆ ಕೊರೋನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ಮಿನಿವಿಧಾನಸೌಧವನ್ನು ಸೀಲ್ ಡೌನ್ ಮಾಡಿ ತಾಲ್ಲೂಕು ಕಛೇರಿಯನ್ನು ಜುಲೈ ೩೦ ಮತ್ತು ೩೧ರಂದು ಬಂದ್ ಮಾಡಲಾಗಿದೆ ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಕೆ.ಆರ್.ಪೇಟೆ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಪಟ್ಟಣದ ಮೋಹನ್ ಭಂಡಾರ್ ಮಾಲೀಕ ಲಕ್ಷ್ಮಣಸೋಲಂಕಿ ಅವರ ಕುಟುಂಬ ಮತ್ತು ಕೆ.ಖಾಸಿಂಖಾನ್ ಮೆಡಿಕಲ್ಸ್ ನ ಮಾಲೀಕರಾದ ಕೆ.ಗೌಸ್ ಖಾನ್ ಮತ್ತು ಪುತ್ರ ಸಾಬೀದ್ ಖಾನ್ ಅವರಿಗೆ ಕೊರೋನಾ ಸೋಂಕು ತಗುಲಿದೆ.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಮತ್ತು ತಹಶೀಲ್ದಾರ್ ಎಂ.ಶಿವಮೂರ್ತಿ ಕೆ.ಆರ್.ಪೇಟೆ ಪಟ್ಟಣ ಹಾಗೂ ತಾಲ್ಲೂಕಿನ ಜನತೆಯಲ್ಲಿ ಮನವಿ ಮಾಡಿದ್ದು ಸಾಮಾಜಿಕ ಅಂತರ ಕಾಪಾಡಿಕೊಂಡು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಿ ಕೊರೋನಾ ಮಹಾಮಾರಿಯ ಅಟ್ಟಹಾಸದ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.
ವರದಿ :- ಡಾ.ಕೆ.ಆರ್.ನೀಲಕಂಠ. ಕೃಷ್ಣರಾಜಪೇಟೆ.
More Stories
ನೂತನ ಅದ್ಯಕ್ಷರಾಗಿ ಶ್ರೀಮತಿ ಮಹಾಲಕ್ಷ್ಮಿ ವಿಶ್ವಾನಾಥ್, ಉಪಾದ್ಯಕ್ಷರಾಗಿ ನಂಜೇಶ್
ಕಿಕ್ಕೇರಮ್ಮನವರ ಜಾತ್ರೆ ಹಾಗೂ ರಥೋತ್ಸವ, ಭಕ್ತಾದಿಗಳಿಗೆ ಮಜ್ಜಿಗೆ ಪಾನಕ
ಐಕನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅಂಬುಜ ಉದಯಶಂಕರ್ ಅವಿರೋಧವಾಗಿ ಆಯ್ಕೆ