May 5, 2024

Bhavana Tv

Its Your Channel

ಡ್ರಂಸೀಡರ್ ನಲ್ಲಿ ಭತ್ತ ನಾಟಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದ ರಾಜ್ಯದ ಪೌರಾಡಳಿತ, ತೋಟಗಾರಿಕೆ, ರೇಷ್ಮೆ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ …

ಕೃಷ್ಣರಾಜಪೇಟೆ ತಾಲ್ಲೂಕಿನ ಹೇಮಗಿರಿಯ ಆದಿಚುಂಚನಗಿರಿ ಶಾಖಾ ಮಠದ ಗದ್ದೆಯಲ್ಲಿ ಡ್ರಂಸೀಡರ್ ನಲ್ಲಿ ಭತ್ತ ನಾಟಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದ ರಾಜ್ಯದ ಪೌರಾಡಳಿತ, ತೋಟಗಾರಿಕೆ, ರೇಷ್ಮೆ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ …

ಸ್ವತಃ ಪಂಚೆಯನ್ನು ಎತ್ತಿಕಟ್ಟಿ ಸಾಮಾನ್ಯ ರೈತನಂತೆ ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಅತ್ಯಾಧುನಿಕ ಡ್ರಂ ಸೀಡರ್ ನಲ್ಲಿ ಭತ್ತ ನಾಟಿ ಕಾರ್ಯಕ್ಕೆ ಚಾಲನೆ ನೀಡಿದ ಸಚಿವ ಡಾ.ನಾರಾಯಣಗೌಡ…

ಆದಿಚುಂಚನಗಿರಿಯ ಹೇಮಗಿರಿ ಶಾಖಾಮಠದ ಕಾರ್ಯದರ್ಶಿಗಳಾದ ಡಾ.ರಾಮಕೃಷ್ಣೇಗೌಡ ಮತ್ತು ಮಂಡ್ಯ ಜಿಲ್ಲಾ ಕಸಾಪ ಅಧ್ಯಕ್ಷ ರವಿಕುಮಾರ್ ಚಾಮಲಾಪುರ ಅವರಿಂದ ಭತ್ತ ನಾಟಿ ಕಾರ್ಯಕ್ಕೆ ಸಾಥ್…
ರೈತ ಬಂಧುಗಳು ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿಸಿಕೊಳ್ಳಬೇಕು. ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಬೇಸಾಯ ಮಾಡಿ ಹೆಚ್ಚಿನ ಲಾಭಗಳಿಸಿ ಅಭಿವೃದ್ಧಿಯ ಪಥದತ್ತ ಸಾಗಬೇಕು…ರೈತರ ಕಷ್ಟಸುಖ ಏನೆಂದು ನನಗೆ ಚೆನ್ನಾಗಿ ಗೊತ್ತಿದೆ..ಏಕೆಂದರೆ ನಾನೊಬ್ಬ ಬಡರೈತನ ಮಗ..ಭೂಮಿತಾಯಿಯನ್ನು ನಂಬಿಕೊಂಡು ಬೇಸಾಯ ಮಾಡಿದರೆ ಎಂದಿಗೂ ರೈತರಿಗೆ ಕಷ್ಟಬರುವುದಿಲ್ಲ..ರೈತರ ಹಿತಕಾಯಲು, ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕವಾದ ಬೆಲೆ ನೀಡಲು ಸರ್ಕಾರವು ಬದ್ಧವಾಗಿದೆ ಎಂದು ಸಚಿವರು ಹೇಳಿದರು…

ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಚಂದ್ರಶೇಖರ್, ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ಹೇಮಗಿರಿಯ ಬಿಜಿಎಸ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಪವಿತ್ರ, ಕೃಷಿ ಅಧಿಕಾರಿ ಶ್ರೀಧರ್ ಮತ್ತಿತರರು ಭತ್ತ ನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: