May 18, 2024

Bhavana Tv

Its Your Channel

ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಬೆಳೆ ಸಮೀಕ್ಷೆ ಉತ್ಸವಕ್ಕೆ ಸಚಿವ ನಾರಾಯಣಗೌಡ ಚಾಲನೆ.

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಬೆಳೆ ಸಮೀಕ್ಷೆ ಉತ್ಸವಕ್ಕೆ ಸಚಿವ ನಾರಾಯಣಗೌಡರಿಂದ ಚಾಲನೆ.ಪ್ರಚಾರರಥಕ್ಕೆ ಪೂಜೆ ಸಲ್ಲಿಸಿ ಈಡುಗಾಯಿ ಒಡೆದು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನಾರಾಯಣಗೌಡ.

ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ಕೃಷಿ ಇಲಾಖೆಯಿಂದ ದೊರೆಯುವ ಮಾಹಿತಿಯನ್ನು ಸಮರ್ಪಕವಾಗಿ ನೀಡಲು ಪ್ರಚಾರ ರಥದ ಮೂಲಕ ಕೃಷಿ ಅಧಿಕಾರಿಗಳು ಜಾಗೃತಿ ಮೂಡಿಸಲಿದ್ದಾರೆ ಎಂದು ವಿವರಿಸಿದ ನಾರಾಯಣಗೌಡ ಬೆಳೆ ಸಮೀಕ್ಷೆ ಕುರಿತ ಕರಪತ್ರಗಳು ಹಾಗೂ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದರು…ರೈತಬಾಂಧವರು ತಾವು ಬೆಳೆದಿರುವ ಬೆಳೆಗಳನ್ನು ನಿಗಧಿತ ನಮೂನೆಯಲ್ಲಿ ತಮ್ಮ ಫೋನಿನ ಮೂಲಕ ಮಾಹಿತಿಯನ್ನು ಆಫ್ ಮೂಲಕ ನೇರವಾಗಿ ಇಲಾಖೆಗೆ ಮಾಹಿತಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಸಚಿವರು ವಿವರಿಸಿದರು.

ಈ ಸಂದರ್ಭದಲ್ಲಿ ಬೆಳೆ ಸಮೀಕ್ಷೆ ಉತ್ಸವ ಪ್ರಚಾರಾಂದೋಲನ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಕೃಷಿ ಇಲಾಖೆಯ ಜಂಟಿನಿರ್ದೇಶಕ ಡಾ.ಚಂದ್ರಶೇಖರ್, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಟಿ.ಎಸ್.ಮಂಜುನಾಥ್, ಕೃಷಿ ಅಧಿಕಾರಿ ಶ್ರೀಧರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಗಂಗಾಧರರೈ, ಜಿಲ್ಲಾ ನಿರ್ದೇಶಕ ವಿನಯಕುಮಾರ್ ಸುವರ್ಣ, ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ, ಜಿಪಂ ಸದಸ್ಯರಾದ ಬಿ.ಎಲ್.ದೇವರಾಜು, ರಾಮದಾಸ್, ಪ್ರಗತಿಪರ ರೈತ ಹೆಚ್.ಟಿ.ರಾಜು ಸೇರಿದಂತೆ ನೂರಾರು ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ

error: