May 12, 2024

Bhavana Tv

Its Your Channel

ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಂದ ಪತ್ರ ಚಳವಳಿ, ತಾಲೂಕು ಪಂಚಾಯತಿ ಕಾರ್ಯಾಲಯದ ಮುಂದೆ ಪ್ರತಿಭಟನೆ, ತಮ್ಮ ಸೇವೆಯನ್ನು ಖಾಯಂಗೊಳಿಸಲು ಆಗ್ರಹ .

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಯೋಜನೆ ಸೇರಿದಂತೆ ಪ್ರಯೋಗಶಾಲಾ ತಂತ್ರಜ್ಞರು, ಶುಶ್ರೂಷಕರು, ಗ್ರೂಪ್ ಡಿ ನೌಕರರು, ಡಾಟಾ ಎಂಟ್ರಿ ಆಪರೇಟರ್ ಗಳು, ಆಶಾ ಮೆಂಟರ್ಸ್ ಗಳು ಹಾಗೂ ಎನ್.ಹೆಚ್.ಎಂ ಸಿಬ್ಬಂಧಿಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಾಮೂಹಿಕವಾಗಿ ಪತ್ರ ಬರೆದು, ಪತ್ರ ಚಳವಳಿ ನಡೆಸಿ ತಮ್ಮ ಸೇವೆಯನ್ನು ಖಾಯಂ ಮಾಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಒತ್ತಾಯಿಸಿದರು.

ಆರೋಗ್ಯ ಇಲಾಖೆಯಲ್ಲಿ ಹೊರ ಗುತ್ತಿಗೆಯ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಶುಶ್ರೂಷಕರು ಸೇರಿದಂತೆ ಎನ್.ಹೆಚ್.ಎಮ್ ಸಿಬ್ಬಂಧಿಗಳು ಕಳೆದ ೧೨ ದಿನಗಳಿಂದ ಕೆಲಸಕ್ಕೆ ಹಾಜರಾಗದೇ ಅನಿರ್ಧಿಷ್ಠಾವಧಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರವು ನಮ್ಮ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಹೊರಗುತ್ತಿಗೆಯ ಆಧಾರದ ಮೇರೆಗೆ ಕೆಲಸ ಮಾಡುತ್ತಿರುವ ಆರೋಗ್ಯ ಸಿಬ್ಬಂಧಿಗಳಾದ ನಾವುಗಳು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದೇವೆ… ನಮ್ಮ ಎಲ್ಲಾ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಡೆಸುತ್ತೇವೆ. ಸರ್ಕಾರ, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಕಳೆದ ೧೫-೨೦ ವರ್ಷಗಳಿಂದ ಹೊರ ಗುತ್ತಿಗೆಯ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಆರೋಗ್ಯ ಸಿಬ್ಬಂಧಿಗಳ ಬೇಡಿಕೆಗಳನ್ನು ಮಾನವೀಯ ನೆಲೆಗಟ್ಟಿನ ಆಧಾರದ ಮೇಲೆ ಕೂಡಲೇ ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಉಗ್ರಗೊಳಿಸಿ ಅನಿರ್ಧಿಷ್ಠಾವಧಿ ಹೋರಾಟ ನಡೆಸುತ್ತೇವೆ ಎಂದು ಆರೋಗ್ಯ ಸಿಬ್ಬಂಧಿಗಳು ಎಚ್ಚರಿಸಿದರು…
ತಾಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದರು…

ಈ ಸಂದರ್ಭದಲ್ಲಿ ಪತ್ರಚಳುವಳಿಯ ಪ್ರತಿಭಟನೆಯಲ್ಲಿ ಹೊರ ಗುತ್ತಿಗೆಯ ಆರೋಗ್ಯ ಸಿಬ್ಬಂಧಿಗಳು, ಪ್ರಯೋಗ ಶಾಲಾ ತಂತ್ರಜ್ಞರು, ಶುಶ್ರೂಷಕರು, ಗ್ರೂಪ್ ಡಿ ನೌಕರರು, ಆಶಾ ಮೆಂಟರ್ಸ್ ಗಳು ಹಾಗೂ ಎನ್.ಹೆಚ್.ಎಮ್ ನೌಕರರು ಭಾಗವಹಿಸಿದ್ದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ..

error: