May 12, 2024

Bhavana Tv

Its Your Channel

ಕೊರೋನಾ ಹಿನ್ನೆಲೆ ಈ ಬಾರಿ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕವಾಗಿ ಸರಳ ದಸರಾ ಆಚರಿಸೋಣ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಮನವಿ .

ಮಂಡ್ಯ: ಕರೋನ ಮಹಾಮಾರಿಯ ಹಾವಳಿಯು ಹೆಚ್ಚಾಗಿರುವುದರಿಂದ ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಸಾಂಪ್ರದಾಯಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಸರಳ ದಸರಾ ಆಚರಿಸೋಣ.ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಈ ಸರಳ ದಸರಾವನ್ನು ಯಶಸ್ವಿಯಾಗಿ ಆಚರಿಸೋಣ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಮನವಿ ಮಾಡಿದರು.

ಇಂದು ಶ್ರೀರಂಗಪಟ್ಟಣದ ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ನಡೆದ ಶ್ರೀರಂಗಟ್ಟಣ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ನಗರದ ಪ್ರಮುಖ ಬೀದಿಗಳಗೆ ವಿಶೇಷವಾಗಿ ದೀಪಾಲಂಕಾರ ಮಾಡಲಾಗುತ್ತಿದೆ ಮತ್ತು ಇದೇ ತಿಂಗಳ ಅಕ್ಟೋಬರ್ ೨೩ ರಂದು ಶುಕ್ರವಾರ ಮಧ್ಯಾಹ್ನ ೩ ಗಂಟೆಗೆ ಬನ್ನಿ ಮಂಟಪದಲ್ಲಿ ಪೂಜೆ ಸಲ್ಲಿಸಿ ಬಾಳೆ ಗಿಡ ಕಡೆದ ನಂತರ ಶ್ರೀ ಚಾಮುಂಡೇಶ್ವರಿ ಹಾಗೂ ಗಣಪತಿ ಪೂಜೆ ಮಾಡಿ ರಥೋತ್ಸವನ್ನು ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡುವ ಮೂಲಕ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಮುಕ್ತಾಯವಾಗುತ್ತದೆ ಎಂದರು .

ಸಭೆಯ ನೇತೃತ್ವ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆAಕಟೇಶರವರು ಮಾತನಾಡಿ ಮೂರು ದಿನಕೊಮ್ಮೆ ಬನ್ನಿ ಮಂಟಪ ಹಾಗೂ ಕಲ್ಯಾಣಿ ಸುತ್ತಮುತ್ತ ಸ್ವಚ್ಚತಾ ಕಾರ್ಯವನ್ನು ಪುರಸಭೆಯಿಂದ ಮಾಡಬೇಕು ಮತ್ತು ಬಾಬುರಾಯನಕೊಪ್ಪಲಿ ನಿಂದ ಕೆ.ಆರ್.ಎಸ್ ವರೆಗೂ ಇರುವ ರಸ್ತೆಯ ಡಿವೈಡರ್ ಅನ್ನು ಶುಚಿತ್ವಗೊಳಿಸಿ ಬಣ್ಣ ಬಳಿಸಬೇಕು, ಶ್ರೀರಂಗಪಟ್ಟಣ ನಗರವನ್ನು ಬಣ್ಣಬಣ್ಣದ ವಿದ್ಯುತ್ ದೀಪಗಳು ಹಾಗೂ ಸ್ವಾಗತ ಫಲಕಗಳಿಂದ ಸಿಂಗರಿಸಿ ದಸರಾ ವೈಭವವನ್ನು ಹೆಚ್ಚಿಸಬೇಕು ಎಂದರು, ನಂತರ ಪಟ್ಟಣದ ಬನ್ನಿಮಂಟಪಕ್ಕೆ ಸಚಿವರು ಹಾಗೂ ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ದಸರಾ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜುಲ್ಫಿಕರ್ ಉಲ್ಲಾ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಕೆ. ಪರಶುರಾಮ್, ಉಪವಿಭಾಗಾಧಿಕಾರಿಗಳು ಮತ್ತು ದಸರಾ ಉಪಸಮಿತಿಯ ಅಧ್ಯಕ್ಷರಾದ ಶಿವಾನಂದ ಮೂರ್ತಿ, ಶ್ರೀರಂಗಪಟ್ಟಣದ ತಹಶೀಲ್ದಾರ್ ರೂಪ, ಬ್ರಾಹ್ಮಣ ಅಭಿವೃದ್ಧಿ ನಿಗಮದ ನಿರ್ದೇಶಕರು ಹಾಗೂ ಸಂಸ್ಕೃತಿ ಸಂಘಟಕರಾದ ವೇದಬ್ರಹ್ಮ ಡಾ.ಭಾನುಪ್ರಕಾಶಶರ್ಮ ಮತ್ತು ದೇವಸ್ಥಾನದ ಮುಖ್ಯ ಅರ್ಚಕರು ಹಾಗೂ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ.ಕೆ.ಆರ್.ನೀಲಕಂಠ . ಕೃಷ್ಣರಾಜಪೇಟೆ . ಮಂಡ್ಯ.

error: