May 13, 2024

Bhavana Tv

Its Your Channel

ಕೃಷ್ಣರಾಜಪೇಟೆ ತಾಲ್ಲೂಕಿನ ಹಿರಳಹಳ್ಳಿ ಗ್ರಾಮದಲ್ಲಿ ಜಾನುವಾರುಗಳಿಗೆ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಿಸಲು ೧೭ನೇ ಸುತ್ತಿನ ಲಸಿಕಾ ಕಾರ್ಯಕ್ರಮ ನಡೆಯಿತು

ಮಂಡ್ಯ: ರಾಜ್ಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆ, ಜಿಲ್ಲಾ ಪಶುಪಾಲನಾ ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ನಡೆದ ಕಾಲು ಬಾಯಿ ರೋಗ ತಡೆ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿದ ಮನ್ ಮುಲ್ ನಿರ್ದೇಶಕ ಹೆಚ್.ಟಿ.ಮಂಜು ಮಾತನಾಡಿ ಜಾನುವಾರುಗಳ ಸಂರಕ್ಷಣೆಗೆ ಲಸಿಕೆಯು ರಾಮಭಾಣದಂತಿದ್ದು ರೈತರಿಗೆ ಆರ್ಥಿಕ ಸಂಕಷ್ಠವನ್ನುoಟು ಮಾಡುವ ಕಾಲುಬಾಯಿ ರೋಗದಿಂದ ರಾಜ್ಯವನ್ನು ಮುಕ್ತಗೊಳಿಸಲು ೧೭ನೇ ಸುತ್ತಿನ ಲಸಿಕೆಯನ್ನು ನೀಡಲಾಗುತ್ತಿದೆ. ರೈತಬಾಂಧವರು ಈ ಸುವರ್ಣಾವಕಾಶವನ್ನು ಸದ್ಬಳಕೆ ಮಾಡಿಕೊಂಡು ಹಸುಗಳನ್ನು ರೋಗರುಜಿನಗಳಿಂದ ಮುಕ್ತಗೊಳಿಸಿ ನೆಮ್ಮದಿಯ ಜೀವನ ನಡೆಸಬೇಕು ಎಂದು ಮನವಿ ಮಾಡಿದರು. ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ಡಾಲುರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು..

ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ದೇವರಾಜು ಮತ್ತು ಮನ್ ಮುಲ್ ನಿರ್ದೇಶಕರಾದ ಕೆ.ಜಿ.ತಮ್ಮಣ್ಣ, ಜಾನುವಾರುಗಳಿಗೆ ಲಸಿಕೆಯನ್ನು ಹಾಕುವ ಮೂಲಕ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಪ್ರತಿಯೊಬ್ಬ ರೈತರೂ ತಪ್ಪದೇ ತಮ್ಮ ಜಾನುವಾರುಗಳಿಗೆ ಉಚಿತವಾಗಿ ಹಾಕುತ್ತಿರುವ ಕಾಲುಬಾಯಿಜ್ವರ ತಡೆ ಲಸಿಕೆಯನ್ನು ಹಾಕಿಸಿ ರಾಸುಗಳ ಆರೋಗ್ಯಕ್ಕೆ ಕಂಟಕವಾಗಿರುವ ಮಹಾಮಾರಿ ಕಾಲುಬಾಯಿ ಜ್ವರವನ್ನು ಹೊಡೆದೋಡಿಸಲು ಪಶುಪಾಲನಾ ಇಲಾಖೆಯೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು…

ಈ ಸಂದರ್ಭದಲ್ಲಿ ಮನ್ ಮುಲ್ ಉಪವ್ಯವಸ್ಥಾಪಕ ಡಾ.ಮೋಹನಕುಮಾರ್, ಹಾಲು ಒಕ್ಕೂಟದ ಮಾರ್ಗದ ವಿಸ್ತರಣಾಧಿಕಾರಿಗಳದ ನಾಗೇಶ್, ಶಿವಶಂಕರ್.ಆರ್, ಗುರುರಾಜ್, ಹಿರಳಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹೆಚ್.ಕೆ.ರಾಜೇಶ್, ಪಶುಪಾಲನಾ ಅಧಿಕಾರಿ ಶಂಕರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು…

ವರದಿ.ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: