May 12, 2024

Bhavana Tv

Its Your Channel

ಕೃಷ್ಣರಾಜಪೇಟೆ ತಾಲ್ಲೂಕು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಮಿನಿವಿಧಾನಕ್ಕೆ ಮುತ್ತಿಗೆ ಹಾಕಿ ಧರಣಿ

ಮಂಡ್ಯ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಅದ್ಯಕ್ಷ ಎಂ.ಪುಟ್ಟಮಾದು, ರಾಜ್ಯ ಸಮಿತಿ ಕಾರ್ಯದರ್ಶಿ ಕೆ.ಹನುಮೇಗೌಡ, ಕೃಷ್ಣರಾಜಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಹೆಚ್.ಗಿರೀಶ್, ಕಾರ್ಯದರ್ಶಿ ಗೋವಿಂದರಾಜು, ಮಳವಳ್ಳಿ ತಾಲ್ಲೂಕು ಅಧ್ಯಕ್ಷ ಬಿ.ಎಂ.ಶಿವಮಲ್ಲು, ಮಂಡ್ಯ ತಾಲ್ಲೂಕು ಘಟಕದ ಅಧ್ಯಕ್ಷ ಅಮಾಸಯ್ಯ ಮತ್ತಿತರರ ನೂರಾರು ಕೃಷಿ ಕೂಲಿ ಕಾರ್ಮಿಕರು ಸಿಐಟಿಯು ನೇತೃತ್ವದಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಮಿನಿವಿಧಾನಕ್ಕೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.

ಭಾಗ್ಯ ಜ್ಯೋತಿ ವಿದ್ಯುತ್ ಬಿಲ್ ಮನ್ನಾ ಮಾಡಬೇಕು. ಮನೆ ಇಲ್ಲದ ಬಡವರಿಗೆ ನಿವೇಶನ ನೀಡಬೇಕು. ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿ ವಾಸಿಸುತ್ತಿರುವವರಿಗೆ ಹಕ್ಕುಪತ್ರ ನೀಡಬೇಕು. ಎಲ್ಲಾ ಬಡವರಿಗೂ ಬಿ.ಪಿ.ಎಲ್ ಕಾರ್ಡುಗಳನ್ನು ನೀಡಬೇಕು. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಜೆಸಿಬಿ ಯಂತ್ರಗಳಿoದ ಮಾಡುತ್ತಿರುವುದನ್ನು ನಿಲ್ಲಿಸಿ ಕೂಲಿಕಾರರಿಗೆ ಉದ್ಯೋಗ ನೀಡಬೇಕು. ನಿಂತಿರುವ ವೃದ್ಯಾಪ್ಯ, ವಿಧಾವಾ, ಅಂಗವಿಕಲ ವೇತನವನ್ನು ಕೂಡಲೇ ನೀಡಬೇಕು. ಬ್ಯಾಂಕುಗಳಲ್ಲಿ ಕೂಲಿಕಾರರಿಗೆ ಸಾಲ ಸೌಲಭ್ಯವನ್ನು ಯಾವುದೇ ಭದ್ರತೆ ಇಲ್ಲದಂತೆ ನೀಡಬೇಕು. ಶ್ರವಣನಹಳ್ಳಿ ಗ್ರಾಮದಲ್ಲಿ ದಲಿತರಿಗೆ ಬಹಿಷ್ಕಾರ ಹಾಕಿರುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಂಡು ನೊಂದ ದಲಿತರಿಗೆ ರಕ್ಷಣೆ ನೀಡಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾದ್ಯಕ್ಷ ಎಂ.ಪುಟ್ಟಮಾದು ಮತ್ತು ತಾಲ್ಲೂಕು ಅದ್ಯಕ್ಷ ಜಿ.ಹೆಚ್.ಗಿರೀಶ್ ಅವರು ಸರ್ಕಾರವನ್ನು ಒತ್ತಾಯಿಸಿದರು .

ಪ್ರತಿಭಟನೆಯ ನಂತರ ತಹಸೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ವರದಿ: ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: