May 12, 2024

Bhavana Tv

Its Your Channel

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವೈಕುಂಠ ಎಂದೇ ಸುಪ್ರಸಿದ್ಧವಾಗಿರುವ ವರಹನಾಥಕಲ್ಲಹಳ್ಳಿಯ ಭೂವರಹನಾಥಸ್ವಾಮಿ ಕ್ಷೇತ್ರದಲ್ಲಿ ವಿಜಯದಶಮಿಯ ಅಂಗವಾಗಿ ಸ್ವಾಮಿಗೆ ವಿಶೇಷ ಪೂಜೆ ಪುರಸ್ಕಾರಗಳು ಜರುಗಿತು.

ಮಂಡ್ಯ: ವಿಜಯದಶಮಿಯ ವಿಶೇಷ ದಿನದ ಪೂಜಾ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಸಾಗರವೇ ಶ್ರೀ ಕ್ಷೇತ್ರಕ್ಕೆ ಹರಿದು ಬಂದಿತ್ತು..

ಕೃಷ್ಣರಾಜಸಾಗರದ ಹಿನ್ನೀರಿಗೆ ಹೊಂದಿಕೊoಡoತೆ ಹೇಮಾವತಿ ನದಿಯ ದಡದಲ್ಲಿರುವ ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತರು ನದಿಯಲ್ಲಿ ಹರಿಗೋಲಿನಲ್ಲಿ ಬೋಟಿಂಗ್ ನಡೆಸಿ ಸಂಭ್ರಮಿಸಿದರು..ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತರಿಗೆ ದೇವಾಲಯ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಉಚಿತವಾಗಿ ಅನ್ನ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿತ್ತು.. ಶ್ರೀ ಭೂವರಾಹಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮ್ಯಾನೇಜಿಂಗ್ ಟ್ರಸ್ಟಿ ಶ್ರೀನಿವಾಸರಾಘವನ್ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು…

ಕೃಷ್ಣರಾಜಪೇಟೆ ಜೆಎಂಎಫ್ ಸಿ ನ್ಯಾಯಾಲಯದ ಹಿರಿಯಶ್ರೇಣಿ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣಪ್ರಸಾದರಾವ್, ತಾಲ್ಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅರವಿಂದಕಾರoತ್, ಚಲನಚಿತ್ರ ನಿರ್ಮಾಪಕ ರಾಕಲೈನ್ ವೆಂಕಟೇಶ್, ಸೂರಪ್ಪಬಾಬು, ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಗಾಯತ್ರಿ, ಉಧ್ಯಮಿ ಶೀಳನೆರೆ ನಟರಾಜ್, ಅನಂತಬಾಬು, ಸುಶೀಲಮ್ಮರಾಮದಾಸ್ ಸೇರಿದಂತೆ ಭಕ್ತಸಾಗರವೇ ಶ್ರೀ ಕ್ಷೇತ್ರಕ್ಕೆ ಆಗಮಿಸಿತ್ತು…ಕಡ್ಡಾಯವಾಗಿ ಮಾಸ್ಕ್ ಧರಿಸಿರುವ ಭಕ್ತರನ್ನು ಸಾಮಾಜಿಕ ಅಂತರ ಕಾಪಾಡಿಕೊಂಡು ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು…

ವರದಿ. ಡಾ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: