May 14, 2024

Bhavana Tv

Its Your Channel

ಶ್ರೀರಾಮ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಲೈಸೆನ್ಸ್ ಪಡೆದಿರುವುದಕ್ಕಿಂತ ಹೆಚ್ಚಿನ ಜಾಗದಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿದ್ದ ಕಟ್ಟಡ ದ ಹೆಚ್ಚುವರಿ ಭಾಗವನ್ನು ಪುರಸಭೆ ಮುಖ್ಯಾಧಿಕಾರಿ ನೇತೃತ್ವದಲ್ಲಿ ತೆರವು

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಚನ್ನರಾಯಪಟ್ಟಣ ರಸ್ತೆಯಲ್ಲಿರುವ ಶ್ರೀರಾಮ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಲೈಸೆನ್ಸ್ ಪಡೆದಿರುವುದಕ್ಕಿಂತ ಹೆಚ್ಚಿನ ಜಾಗದಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸುತ್ತಿದ್ದ ಕಟ್ಟಡ ದ ಹೆಚ್ಚುವರಿ ಸಜ್ಜಾ, ಸ್ಟೇರ್ ಕೇಸ್ ಸೇರಿದಂತೆ ಇತರೆ ಭಾಗವನ್ನು ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ನೇತೃತ್ವದಲ್ಲಿ ಪುರಸಭೆಯ ಸಿಬ್ಬಂಧಿಗಳು ತೆರವುಗೊಳಿಸಿದರು.

ಕೃಷ್ಣರಾಜಪೇಟೆ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಪುರಸಭೆಯಿಂದ ಲೈಸೆನ್ಸ್ ಪಡೆಯದೇ ಅಕ್ರಮವಾಗಿ ಹಾಗೂ ಕಾನೂನು ಬಾಹಿರವಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಪುರಸಭೆಯು ಸರ್ಕಾರದ ನಿರ್ದೇಶನದಂತೆ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ಮುಂದಾಗಿದ್ದು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸತೀಶ್ ಕುಮಾರ್ ಪತ್ರಕರ್ತರಿಗೆ ಮಾಹಿತಿ ನೀಡಿದರು…

ಬೆಂಗಳೂರಿನ ಉದ್ಯಮಿಗಳಾದ ದೇವರಾಜು ಅವರು ಕಟ್ಟಡ ನಿರ್ಮಿಸಲು ಲೈಸೆನ್ಸ್ ಪಡೆದುಕೊಂಡು ಕಾಮಗಾರಿ ಆರಂಬಿಸಿದ್ದರೂ ಪಕ್ಕದ ನಿವೇಶನಕ್ಕೆ ಕಾನೂನು ಬದ್ಧವಾಗಿ ಬಿಡಬೇಕಾದ ಜಾಗಬಿಡದೇ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸುತ್ತಿದ್ದಾರೆ. ಈ ಬಗ್ಗೆ ಕ್ರಮಕೈಗೊಂಡು ನಮಗೆ ನ್ಯಾಯದೊರಕಿಸಿಕೊಡಬೇಕು ಎಂದು ಪಕ್ಕದ ನಿವೇಶನದ ಮಾಲೀಕರಾದ ಜ್ಯೋತಿ ದೇವರಾಜು ಜಿಲ್ಲಾಧಿಕಾರಿಗಳಿಗೆ ಹಾಗೂ ಪೌರಾಡಳಿತ ನಿರ್ದೇಶಕರಿಗೆ ದೂರು ನೀಡಿ ನೊಂದ ನಿವೇಶನದಾರರಿಗೆ ನ್ಯಾಯ ದೊರಕಿಸಿಕೊಡದ ಮುಖ್ಯಾಧಿಕಾರಿ ಸತೀಶ್ ಕುಮಾರ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು…

ಕಾನೂನು ಹಾಗೂ ನಿಯಮವನ್ನು ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ದೇವರಾಜು ಅವರಿಗೆ ಸಾಕಷ್ಟು ಅವಕಾಶ ನೀಡಿದ್ದರೂ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಭಾಗಗಳನ್ನು ತೆರವುಗೊಳಿಸದ ಹಿನ್ನೆಲೆಯಲ್ಲಿ ಇಂದು ಧಿಡೀರ್ ಕಾರ್ಯಾಚರಣೆ ನಡೆಸಿದ ಪುರಸಭೆ ಸಿಬ್ಬಂಧಿಗಳು ಅಕ್ರಮವಾಗಿ ನಿರ್ಮಿಸಿದ ಕಟ್ಟಡದ ಭಾಗಗಳನ್ನು ತೆರವುಗೊಳಿಸಿದರು.ಪಟ್ಟಣ ಪೋಲಿಸರ ಬಿಗಿ ಬಂದೋಬಸ್ತಿನಲ್ಲಿ ಕಟ್ಟಡದ ಅಕ್ರಮ ಭಾಗಗಳನ್ನು ತೆರವುಗೊಳಿಸಲಾಯಿತು…

ಈ ಸಂದರ್ಭದಲ್ಲಿ ಪುರಸಭೆಯ ಎಂಜಿನಿಯರ್ ಮಧುಸೂದನ್, ಪರಿಸರ ಎಂಜಿನಿಯರ್ ರುದ್ರೇಗೌಡ, ಆರೋಗ್ಯ ಪರಿವೀಕ್ಷಕರಾದ ಅಶೋಕ್, ನರಸಿಂಹಶೆಟ್ಟಿ ಮತ್ತಿತರರು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು..

ವರದಿ ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ .

error: