May 13, 2024

Bhavana Tv

Its Your Channel

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜ್ಞಾನತಾಣ ವತಿಯಿಂದ ಕೆ.ಆರ್.ಪೇಟೆಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳು ಮತ್ತು ಲ್ಯಾಪ್ ಟಾಪ್‌ಗಳ ವಿತರಣೆ.

ಮಂಡ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನತಾಣ ಕಾರ್ಯಕ್ರಮದ ಅಡಿಯಲ್ಲಿ ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳು ಮತ್ತು ಲ್ಯಾಪ್ ಟಾಪ್ ಗಳ ವಿತರಣಾ ಸಮಾರಂಭವು ಕೆ.ಆರ್.ಪೇಟೆ ಪಟ್ಟಣದ ರಾಮದಾಸ್ ರೆಸ್ಟೋರೆಂಟ್ ನ ಸುಲೋಚನಮ್ಮ ಸಭಾಂಗಣದಲ್ಲಿ ನಡೆಯಿತು..
ರಾಜ್ಯದ ತೋಟಗಾರಿಕೆ, ರೇಷ್ಮೆ, ಪೌರಾಡಳಿತ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಗಳು ಮತ್ತು ಟ್ಯಾಬ್ ಗಳನ್ನು ವಿತರಿಸಿ ಮಾತನಾಡಿದರು…ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕಾಗಿ ಪೂಜ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನಾಡಿನಾದ್ಯಂತ ೨೦ಕೋಟಿ ರೂಪಾಯಿಗಳ ವೆಚ್ಚದಲ್ಲಿ ಜ್ಞಾನತಾಣ ಕಾರ್ಯಕ್ರಮದ ಅಡಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಇಡೀ ನಾಗರಿಕ ಸಮಾಜವೇ ಮೆಚ್ಚುವಂತಹ ಕೆಲಸ ಮಾಡುತ್ತಿದ್ದಾರೆ. ಅನ್ನದಾನದ ಮೂಲಕ ವಿಶ್ವಖ್ಯಾತಿಯನ್ನು ಪಡೆದಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳವು ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನ ಸಹಕಾರ ಹಸ್ತವನ್ನು ಚಾಚುವ ಮೂಲಕ ಚುನಾಯಿತ ಸರ್ಕಾರವು ಮಾಡಬೇಕಾದ ಕೆಲಸವನ್ನು ಖಾವಂದರಾದ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿದ್ದಾರೆ ಎಂದು ನಾರಾಯಣಗೌಡ ಅಭಿಮಾನದಿಂದ ಹೇಳಿದರು…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಪಿ.ಗಂಗಾಧರರೈ ಪ್ರಾಸ್ತಾವಿಕ ನುಡಿಗಳನ್ನಾಡಿ ಧರ್ಮಸ್ಥಳ ಸಂಸ್ಥೆಯು ಇಂದಿನ ಕೊರೋನಾ ಸಂಕಷ್ಠದ ಸಮಯದಲ್ಲಿ ಮಕ್ಕಳು ಟ್ಯಾಬ್ ಮತ್ತು ಲ್ಯಾಪ್ ಟಾಪ್ ಮೂಲಕ ಆನ್ ಲೈನ್ ತರಗತಿಯಲ್ಲಿ ಭಾಗವಹಿಸಲು ಅನುಕೂಲವಾಗುಂತೆ ಜ್ಞಾನತಾಣ ಕಾರ್ಯಕ್ರಮದ ಮೂಲಕ ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ನೆರವಿಗೆ ಬಂದಿದೆ. ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ೧೫೦ ವಿದ್ಯಾರ್ಥಿಗಳು ಜ್ಞಾನತಾಣ ಕಾರ್ಯಕ್ರಮದ ಯೋಜನೆಯ ಫಲಾನುಭವಿಗಳಾಗಿ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು…

ಈ ಸಂದರ್ಭದಲ್ಲಿ ಧರ್ಮಸ್ಥಳ ಸಂಸ್ಥೆಯ ಜನಜಾಗೃತಿ ಹೋರಾಟ ಸಮಿತಿಯ ಮಂಡ್ಯ ಜಿಲ್ಲಾ ಘಟಕದ ಮಾಜಿಅಧ್ಯಕ್ಷರಾದ ಕೆ.ಎಸ್.ರಾಜೇಶ್, ನಿರ್ದೇಶಕರಾದ ಎಸ್.ಅಂಬರೀಶ್, ಅಕ್ಕಿಹೆಬ್ಬಾಳು ರಘು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎನ್.ಚಂದ್ರಮೌಳಿ, ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ, ತಾಲೂಕು ಯೋಜನಾಧಿಕಾರಿ ಮಮತಾಶೆಟ್ಟಿ, ಪುರಸಭೆ ಮಾಜಿಸದಸ್ಯ ಕೆ.ಆರ್.ನೀಲಕಂಠ ಸೇರಿದಂತೆ ಫಲಾನುಭವಿ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…

ವರದಿ.ಕೆ.ಆರ್.ನೀಲಕಂಠ .
ಕೃಷ್ಣರಾಜಪೇಟೆ . ಮಂಡ್ಯ.

error: